ಶ್ರೀಮುರಳಿ ಅಭಿನಯದ 'ಭರಾಟೆ' ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ!
ಶ್ರೀಮುರಳಿ ಅಭಿಯದ ಭರಾಟೆ ಚಿತ್ರದ ಚಿತ್ರೀಕರಣಕ್ಕೂ ಮುನ್ನ ಚಿತ್ರದ ಕುರಿತಂತೆ ಚಿತ್ರತಂಡ ಕಳೆದ ವಾರ ಫಸ್ಟ್ ಲುಕ್ ಬಿಡುಗಡೆ ಮಾಡಿ ಕ್ರೇಜ್ ಹುಟ್ಟಿಸಿತ್ತು...

Published On :
ಶ್ರೀಮುರಳಿ ಅಭಿಯದ ಭರಾಟೆ ಚಿತ್ರದ ಚಿತ್ರೀಕರಣಕ್ಕೂ ಮುನ್ನ ಚಿತ್ರದ ಕುರಿತಂತೆ ಚಿತ್ರತಂಡ ಕಳೆದ ವಾರ ಫಸ್ಟ್ ಲುಕ್ ಬಿಡುಗಡೆ ಮಾಡಿ ಕ್ರೇಜ್ ಹುಟ್ಟಿಸಿತ್ತು.
ಇದೀಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಆಗಸ್ಟ್ 15ರಂದು ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.
ಇನ್ನು ಆಗಸ್ಟ್ 21ರಂದು ರಾಜಸ್ತಾನದಲ್ಲಿ ಮುಹೂರ್ತ ನಡೆಯಲಿದ್ದು ಅಂದಿನಿಂದಲೇ ಚಿತ್ರದ ಚಿತ್ರೀಕರಣ ನಡೆಯಲಿದೆ. ಮೊದಲ ಭಾಗದ ಚಿತ್ರೀಕರಣ ಮರುಭೂಮಿ ರಾಜಸ್ತಾನದಲ್ಲಿ ನಡೆಯಲಿದೆ.
ಇನ್ನು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ನಿರ್ದೇಶಕ ಚೇತನ್ ಕುಮಾರ್ ತಮ್ಮ ಚಿತ್ರಕ್ಕೆ ಅರ್ಜುನ್ ಜನ್ಯರಿಂದ ಸಂಗೀತ ಸಂಯೋಜನೆ ಮಾಡಿಸುತ್ತಿದ್ದಾರೆ.
ಭರಾಟೆ ಚಿತ್ರದ ಮೂಲಕ ನಿರ್ಮಾಣಕ್ಕೆ ಕೈಹಾಕಿದ್ದಾರೆ ಸುಪ್ರೀತ್. ಚಿತ್ರದಲ್ಲಿ ಒಂಬತ್ತು ಮಂದಿ ಖಳನಾಯಕರು ಅಭಿನಯಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodಚೇತನ್ ಕುಮಾರ್ಶ್ರೀಮುರಳಿArjun Janyaಅರ್ಜುನ್ ಜನ್ಯಸ್ಯಾಂಡಲ್ವುಡ್Chethan KumarSriimuraliಭರಾಟೆBharaate
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


