ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ 'ಭಗತ್ ಸಿಂಗ್' ಪಾತ್ರದಲ್ಲಿ ಡಿ ಬಾಸ್ ದರ್ಶನ್!
ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ ಡಿ ಬಾಸ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ...

Published On :
ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ ಡಿ ಬಾಸ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರಕ್ಕಾಗಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರದ ನಿರ್ದೇಶಕ ನರಸಿಂಹ ಅವರು ಹೇಳಿದ್ದಾರೆ.
ದರ್ಶನ್ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಫೋಟೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇನ್ನು ದರ್ಶನ್ ಜತೆ ಪ್ರಜ್ವಲ್ ಮತ್ತು ಭಾವನರ ಕೆಲ ದೃಶ್ಯಗಳನ್ನು ಅದಾಗಲೇ ಚಿತ್ರೀಕರಣ ಮಾಡಲಾಗಿದೆ.
ಇದು ಭಗತ್ ಸಿಂಗ್ ಅವರ ಜೀವನಾಧಾರಿತ ಚಿತ್ರವಲ್ಲ. ಬದಲಿಗೆ ಸ್ವಾತಂತ್ರ್ಯ ಹೋರಾಟಗಾರನ ಮತ್ತು ಪ್ರಜ್ವಲ್ ನಡುವಿನ ಸಂಬಂಧ. ಇದು ಒಂದು ಸಂಪೂರ್ಣ ಔಟ್ ಅಂಡ್ ಔಟ್ ಎಂಟರ್ಟೈನ್ಮೆಂಟ್ ಚಿತ್ರದ ಎಂದು ನಿರ್ದೇಶಕರು ಹೇಳಿದ್ದಾರೆ.
ಶೇಖಡ 75ರಷ್ಟು ಚಿತ್ರೀಕರಣ ಮುಕ್ತಾಯವಾಗಿದ್ದು ಚಿತ್ರದ ಹಾಡುಗಳ ಚಿತ್ರೀಕರಣ ಬಾಕಿ ಇದೆ. ಇನ್ನು ರಮೇಶ್ ಅರವಿಂದ್ ಚಿತ್ರದಲ್ಲಿ ಕಳನಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅವರ ಭಾಗದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗಿದೆ.
ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸುತ್ತಿದ್ದು ನವೀನ್ ಕುಮಾರ್ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SandalwoodDarshanದರ್ಶನ್Bhagat Singhಭಗತ್ ಸಿಂಗ್Prajwal Devarajಪ್ರಜ್ವಲ್ ದೇವರಾಜ್ಸ್ಯಾಂಡಲ್ವುಡ್Inspector Vikramಇನ್ಸ್‌ಪೆಕ್ಟರ್ ವಿಕ್ರಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


