ಸಿನಿಮಾ ಸುದ್ದಿ

ಕನ್ನಡ ಚಿತ್ರ ನಿರ್ದೇಶಕರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಿ.ನಾಗೇಂದ್ರ ಪ್ರಸಾದ್‌ ಆಯ್ಕೆ

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ. ನಟ, ನಿರ್ದೇಶಕ, ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸತತ ಎರಡನೇ ಬಾರಿಗೆ.....

ಕನ್ನಡ ಚಿತ್ರ ನಿರ್ದೇಶಕರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಿ.ನಾಗೇಂದ್ರ ಪ್ರಸಾದ್‌ ಆಯ್ಕೆ
ವಿ.ನಾಗೇಂದ್ರ ಪ್ರಸಾದ್
Published On :
ಬೆಂಗಳೂರು: ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ. ನಟ, ನಿರ್ದೇಶಕ, ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸತತ ಎರಡನೇ ಬಾರಿಗೆ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಪ್ರಕ್ರಿಯೆ ನಡೆದಿತ್ತು. ಹಿರಿಯ ನಿರ್ದೇಶಕ ಭಗವಾನ್ ಫಲಿತಾಂಶ ಘೋಷಣೆ ಮಾಡಿದರು.
ಒಟ್ಟು  125 ನಿರ್ದೇಶಕರು ಮತದಾನ ಮಾಡಿದ್ದು ಇದರಲ್ಲಿ 10 ಅಸಿಂಧುವಾಗಿದೆ. ನಾಗೇಂದ್ರ ಪ್ರಸಾದ್‌ 100 ಮತ ಗಳಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಸಂಘದ ಉಪಾಧ್ಯಕ್ಷರಾಗಿ ಸಾಧು ಕೋಕಿಲಾ, ರೂಪಾ ಅಯ್ಯರ್,ಆಯ್ಕೆಗೊಂಡಿದ್ದರೆ ಶರಣ್ ಕಬ್ಬೂರ್, ನಾಗೇಂದ್ರ ಕಾರ್ಯದರ್ಶಿಗಳಾಗಿ ಚುನಾಯಿತರಾದರು. ನಾಗೇಶ್ ಟಿ.ಎನ್ ಸಂಘದ ಖಜಾಂಚಿಯಾಗಿ ನೇಮಕವಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.