ಸಿನಿಮಾ ಸುದ್ದಿ

ಯಶೋಮಾರ್ಗ ಹೆಸರಲ್ಲಿ ದೇಣಿಗೆ ಸಂಗ್ರಹಿಸಬೇಡಿ: ನಟ ಯಶ್ ಮನವಿ

ಕೊಡಗು ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ...

ಯಶೋಮಾರ್ಗ ಹೆಸರಲ್ಲಿ ದೇಣಿಗೆ ಸಂಗ್ರಹಿಸಬೇಡಿ: ನಟ ಯಶ್ ಮನವಿ
ನಟ ಯಶ್
Published On :

ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ಹಣ ಸಂಗ್ರಹಿಸದಂತೆ ರಾಕಿಂಗ್ ಸ್ಟಾರ್ ಯಶ್ ಸಾರ್ವಜನಿಕರಲ್ಲಿ ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗುವ ನೆಪದಲ್ಲಿ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ದೇಣಿಗೆ ಸಂಗ್ರಹ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದರ ಉದ್ದೇಶ ಒಳ್ಳೆಯದೇ ಆದರೂ ಕೂಡ ಯಶೋಮಾರ್ಗ ಹೆಸರನ್ನ ತರಬೇಡಿ. ಸ್ವಂತ ಸಂಪಾದನೆಯ ಹಣದಲ್ಲಿ ಕೈಲಾದ ಮಟ್ಟಿಗೆ ಸಮಾಜ ಸೇವೆ ಮಾಡುತ್ತಿದ್ದೇನೆ. ಇದಕ್ಕಾಗಿ ಜನರಿಂದ ಯಾವುದೇ ದೇಣಿಗೆ ಸ್ವೀಕರಿಸುತ್ತಿಲ್ಲ ಎಂದು ತಮ್ಮ ಫೇಸ್ ಬುಕ್ ಪುಟದಲ್ಲಿ ನಿನ್ನೆ ಯಶ್ ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕರ ನೆರವು ಯಶೋಮಾರ್ಗಕ್ಕೆ ಅವಶ್ಯವೆನಿಸುವ ಸಂದರ್ಭದಲ್ಲಿ ನಾನೇ ಖುದ್ದು ನಿಮ್ಮ ಮುಂದೆ ಬರುತ್ತೇನೆ. ಸದ್ಯಕ್ಕೆ ಯಶೋಮಾರ್ಗದ ಹೆಸರಿನಲ್ಲಿ ದೇಣಿಗೆ ಕೇಳಲು ಬಂದವರಿಗೆ ದೇಣಿಗೆ ನೀಡಬೇಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.