ಯುಎಫ್ಒ ಎಡವಟ್ಟಿಗೆ ಒಂದಲ್ಲಾ ಎರಡಲ್ಲಾ 56 ಶೋಗಳು ರದ್ದು!
ಆ.24 ರಂದು ಬಿಡುಗಡೆಯಾದ ನಿರ್ದೇಶಕ ಸತ್ಯಪ್ರಕಾಶ್ ಅವರ ಒಂದಲ್ಲಾ ಎರಡಲ್ಲಾ ಸಿನಿಮಾದ 56 ಶೋಗಳು ರದ್ದಾಗಿದೆ.

Published On :
ಬೆಂಗಳೂರು: ಒಳ್ಳೆಯ ಸಿನಿಮಾಗಳು ಬರುವುದೇ ಅಪರೂಪವೆಂಬಂತಾಗಿರುವ ಸಂದರ್ಭದಲ್ಲಿ ಯುಎಫ್ಒ ದಲ್ಲಿ ಎಡವಟ್ಟಾಗಿದ್ದು ಚಿತ್ರತಂಡ ಸಮಸ್ಯೆ ಎದುರಿಸುತ್ತಿದೆ.
ಯುಎಫ್ಒದಲ್ಲಿ ಉಂಟಾಗಿರುವ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಯುಎಫ್ ಒದಲ್ಲಿ ಆಗಿರುವ ಸಮಸ್ಯೆಯಿಂದ ಮಣಿಪಾಲ, ಶಿವಮೊಗ್ಗ, ಮಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಿನಿಮಾ ಪ್ರದರ್ಶನ ಸಾಧ್ಯವಾಗಿಲ್ಲ.
ಒಂದೆಡೆ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದ್ದರೆ, ಮತ್ತೊಂದೆಡೆ ಯುಎಫ್ಒ ಸಮಸ್ಯೆಯಿಂದಾಗಿ ಕೆಲವೆಡೆ ಪ್ರದರ್ಶನವೇ ಸಾಧ್ಯವಾಗಿಲ್ಲ. 80 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೇವಲ 23 ಸೆಂಟರ್ ಗಳಲ್ಲಿ ಮಾತ್ರ ಚಿತ್ರ ರಿಲೀಸ್ ಆಗಿದೆ. ಅಸಮಾಧಾನಗೊಂಡಿರುವ ಚಿತ್ರ ತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಲು ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


