ಸಿನಿಮಾ ಸುದ್ದಿ

'ಮೈ ನೇಮ್ ಇಸ್ ಕಿರಾತಕ' ಚಿತ್ರಕ್ಕೆ ಯಶ್ ಭರ್ಜರಿ ಸಿದ್ಧತೆ, ಯಶ್ ಹೊಸ ಗೆಟಪ್ ಹೇಗಿದೆ ಗೊತ್ತ!

ಬಹುನಿರೀಕ್ಷಿತ ಕೆಜಿಎಫ್ ಚಿತ್ರಕ್ಕಾಗಿ ಎರಡು ವರ್ಷಗಳಿಂದ ಉದ್ದನೆಯ ಗಡ್ಡ ಬಿಟ್ಟಿದ್ದ ರಾಕಿಂಗ್ ಸ್ಟಾರ್ ಯಶ್ ಇದೀಗ ತಮ್ಮ ಗಡ್ಡ ಬೋಳಿಸಿ ಹೊಸ ಅವತಾರ ತಾಳಿದ್ದು ಮೈ ನೇಮ್ ಇಸ್

'ಮೈ ನೇಮ್ ಇಸ್ ಕಿರಾತಕ' ಚಿತ್ರಕ್ಕೆ ಯಶ್ ಭರ್ಜರಿ ಸಿದ್ಧತೆ, ಯಶ್ ಹೊಸ ಗೆಟಪ್ ಹೇಗಿದೆ ಗೊತ್ತ!
ಯಶ್
Published On :
ಬಹುನಿರೀಕ್ಷಿತ ಕೆಜಿಎಫ್ ಚಿತ್ರಕ್ಕಾಗಿ ಎರಡು ವರ್ಷಗಳಿಂದ ಉದ್ದನೆಯ ಗಡ್ಡ ಬಿಟ್ಟಿದ್ದ ರಾಕಿಂಗ್ ಸ್ಟಾರ್ ಯಶ್ ಇದೀಗ ತಮ್ಮ ಗಡ್ಡ ಬೋಳಿಸಿ ಹೊಸ ಅವತಾರ ತಾಳಿದ್ದು ಮೈ ನೇಮ್ ಇಸ್ ಕಿರಾತಕ ಚಿತ್ರದಲ್ಲಿ ನೂತನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 
ಈ ಹಿಂದೆ ಯಶ್ ಅಭಿನಯದ ಕಿರಾತಕ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಕಿರಾತಕ ಮುಂದುವರೆದ ಭಾಗವಾಗಿ ಮೈ ನೇಮ್ ಇಸ್ ಕಿರಾತಕ ಚಿತ್ರ ನಿರ್ಮಾಣವಾಗುತ್ತಿದೆ. 
ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದು ಜಯಣ್ಣ ಪ್ರೊಡೆಕ್ಷನ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಇನ್ನು ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 3ರಿಂದ ಆರಂಭಗೊಳ್ಳಲಿದೆ. ಮೊದಲ ಹಂತದ ಚಿತ್ರೀಕರಣ ಮಂಡ್ಯದಲ್ಲಿ ನಡೆಯಲಿದೆ. 
ಯಶ್ ಗೆ ಜೊತೆಯಾಗಿ ನಟಿಸಲು ಶ್ವೇತ ನಂದಿತಾರನ್ನು ಆಯ್ಕೆ ಮಾಡಲಾಗಿದ್ದು ಇನ್ನೊಂದು ನಟಿಯ ಹುಡುಕಾಟದಲ್ಲಿ ಚಿತ್ರತಂಡ ನಿರತವಾಗಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದಾರೆ. 
ಚಿತ್ರದಲ್ಲಿ ಟಿಎಸ್ ನಾಗಾಭರಣ, ತಾರಾ, ಕುರಿ ಪ್ರತಾಪ, ಸಾಧು ಕೋಕಿಲಾ ಸೇರಿದಂತೆ ಹಲವರು ನಟಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.