ನಟ ನಂದಮೂರಿ ಹರಿಕೃಷ್ಣ ಪಂಚಭೂತಗಳಲ್ಲಿ ಲೀನ
ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ ನಟ ನಂದಮೂರಿ ಹರಿಕೃಷ್ಣ ಅವರು ಪಂಚಭೂತಗಳಲ್ಲಿ ಲೀನರಾದರು.

Published On :
ಹೈದರಾಬಾದ್: ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ ನಟ ನಂದಮೂರಿ ಹರಿಕೃಷ್ಣ ಅವರು ಪಂಚಭೂತಗಳಲ್ಲಿ ಲೀನರಾದರು.
ನಿನ್ನೆ ತೆಲಂಗಾಣದ ನಲ್ಗೊಂಡದಲ್ಲಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಭೀಕರ ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ನಟ ನಂದಮೂರಿ ಹರಿಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ಸಂಸ್ಕಾರ ಹೈದರಾಬಾದ್ ನ ಜೂಬ್ಲಿಹಿಲ್ಸ್ ನಲ್ಲಿರುವ ಮಹಾಪ್ರಸ್ಥಾಮ್ ರುದ್ರಭೂಮಿಯಲ್ಲಿ ನೆರವೇರಿತು.
ಹರಿಕೃಷ್ಣ ಅವರ ಪಾರ್ಥೀವ ಶರೀರಕ್ಕೆ ಅವರ ಪುತ್ರ ನಟ ನಂದಮೂರಿ ಕಲ್ಯಾಣ್ ರಾಮ್ ಮತ್ತು ನಟ ಜೂನಿಯರ್ ಎನ್ ಟಿಆರ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಹರಿಕೃಷ್ಣ ಅಂತ್ಯ ಸಂಸ್ಕಾರ ನೆರವೇರಿತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ನಟ ಚಿರಂಜೀವಿ ಮುಂತಾದ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ತಾವೇ ಕಾರು ಚಲಾಯಿಸಿಕೊಂಡು ನಲ್ಲೂರಿನ ಅಭಿಮಾನಿಯೊಬ್ಬರ ಮಗನ ಮದುವೆ ಸಮಾರಂಭಕ್ಕೆ ತೆರಳುವಾಗ ಹರಿಕೃಷ್ಣ ಅವರ ಕಾರಿಗೆ ಅಪಘಾತ ಸಂಭವಿಸಿತ್ತು. ಹರಿಕೃಷ್ಣ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಈ ಹಿಂದೆ ಹರಿಕೃಷ್ಣ ಅವರ ಹಿರಿಯ ಪುತ್ರ ಕೂಡ ಇದೇ ರೀತಿ ಇದೇ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tollywoodಹೈದರಾಬಾದ್ಟಾಲಿವುಡ್ಅಪಘಾತaccidentHyderbadNandamuri Harikrishnaನಂದಮೂರಿ ಹರಿಕೃಷ್ಣNTR Familyಎನ್ ಟಿಆರ್ ಕುಟುಂಬ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


