ಸಿನಿಮಾ ಸುದ್ದಿ

ಫೇಸ್ ಬುಕ್ ಮೂಲಕ ಕಿರುಕುಳ; ನಟ ದರ್ಶನ್ ಪತ್ನಿ ಪೊಲೀಸರಿಗೆ ದೂರು

ಫೇಸ್ ಬುಕ್ ನಲ್ಲಿ ಕಿಡಿಗೇಡಿಗಳು ಕಿರುಕುಳ ನೀಡಿ ತಮ್ಮ ಹೆಸರು ಕೆಡಿಸಲು ಯತ್ನಿಸುತ್ತಿದ್ದಾರೆ ...

ಫೇಸ್ ಬುಕ್ ಮೂಲಕ ಕಿರುಕುಳ; ನಟ ದರ್ಶನ್ ಪತ್ನಿ ಪೊಲೀಸರಿಗೆ ದೂರು
ವಿಜಯಲಕ್ಷ್ಮಿ ದರ್ಶನ್
Published On :

ಬೆಂಗಳೂರು: ಫೇಸ್ ಬುಕ್ ನಲ್ಲಿ ಕಿಡಿಗೇಡಿಗಳು ಕಿರುಕುಳ ನೀಡಿ ತಮ್ಮ ಹೆಸರು ಕೆಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಜಯಲಕ್ಷ್ಮಿ ಅವರ ಮತ್ತು ಅವರ ಕುಟುಂಬದವರ ಚಿತ್ರ ಬಳಸಿ ಫೇಸ್ ಬುಕ್ ನಲ್ಲಿ ಕೀಳುಮಟ್ಟದ ಪದ ಬಳಕೆ ಮಾಡಿ ಪೋಸ್ಟ್ ಮಾಡುತ್ತಿದ್ದಾರೆ. ದರ್ಶನ್ ಜೊತೆ ವಿಜಯಲಕ್ಷ್ಮಿ ಇರುವ ಚಿತ್ರವನ್ನು ಬಳಸಿಕೊಂಡು ದರ್ಶನ್ ಜಾಗದಲ್ಲಿ ತನ್ನ ಚಿತ್ರ ಸೇರಿಸಿ ಆರೋಪಿ ಆಕೆ ನನ್ನ ಪತ್ನಿ, ಮೈ ವೈಫ್ ಎಂದು ಬರೆದುಕೊಂಡಿದ್ದಾನೆ ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಾರೆ.

ಘಟನೆ ಸಂಬಂಧ ವಿಜಯಲಕ್ಷ್ಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು ಐಪಿಸಿ ಸೆಕ್ಷನ್ 354(ಡಿ), 354ಎ(1)(4), (505), (507),(402) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.