'ಸಲಾಂ ರಾಕಿಂಗ್ ಭಾಯ್': ಕೆಜಿಎಫ್ ಚಿತ್ರದ ಮೊದಲ ಲಿರಿಕಲ್ ಸಾಂಗ್ ರಿಲೀಸ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಬಿಡುಗಡೆಗೆ ಸಜ್ಜಾಗಿರುವಂತೆಯೇ ಚಿತ್ರದ ತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳಲ್ಲಿ ಮತ್ತಷ್ಟು ಕ್ರೇಜ್ ಹೆಚ್ಚಾಗುವಂತೆ ಮಾಡಿದೆ.

Published On :
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಬಿಡುಗಡೆಗೆ ಸಜ್ಜಾಗಿರುವಂತೆಯೇ ಚಿತ್ರದ ತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳಲ್ಲಿ ಮತ್ತಷ್ಟು ಕ್ರೇಜ್ ಹೆಚ್ಚಾಗುವಂತೆ ಮಾಡಿದೆ.
ಟ್ವಿಟರ್ ನಲ್ಲಿ ನಟ ಯಶ್ ಚಿತ್ರದ 'ಸಲಾಂ ರಾಕಿಂಗ್ ಭಾಯ್' ಎಂಬ ಲಿರಿಕಲ್ ಹಾಡನನ್ನು ಬಿಡುಗಡೆ ಮಾಡಿದ್ದು, ಈ ಮಾಸ್ ಸಾಂಗ್ ಯಶ್ ಅಭಿಮಾನಿಗಳ ಹುಚ್ಚೆಬ್ಬಿಸಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಬರೊಬ್ಬರಿ ಸುಮಾರು 4 ಲಕ್ಷದ 0 ಸಾವಿರ ಮಂದಿ ಈ ಹಾಡನ್ನು ಕೇಳಿದ್ದಾರೆ.
ಕನ್ನಡ ಮಾತ್ರವಲ್ಲದೆ ಒಟ್ಟು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಇಂದು ಬಿಡುಗಡೆಯಾದ ಲಿರಿಕಲ್ ಸಾಂಗ್ ಕೂಡ ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು ಮತ್ತು ಮಲಯಾಳಂ ನಲ್ಲಿ ಬಿಡುಗಡೆಯಾಗಿದೆ. ಲಹರಿ ಮ್ಯೂಸಿಕ್ಸ್ ಚಿತ್ರದ ಹಾಡಿನ ಹಕ್ಕು ಪಡೆದುಕೊಂಡಿದ್ದು, ಲಹರಿ ಮ್ಯೂಸಿಕ್ ಯೂಟ್ಯೂಬ್ ಖಾತೆಯಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ.
ಇನ್ನು ತಮಿಳು ವರ್ಷನ್ ಸಾಂಗ್ ಅನ್ನು ಸುಮಾರು 51 ಸಾವಿರ ಮಂದಿ ವೀಕ್ಷಣೆ ಮಾಡಿದ್ದು, ತೆಲುಗು ವರ್ಷನ್ ಸಾಂಗ್ ಅನ್ನು 1 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಆದರೆ ಮಲಯಾಳಂ ವರ್ಷನ್ ಸಾಂಗ್ ಗೆ ತಾಂತ್ರಿಕ ದೋಷ ಎದುರಾದಂತಿದೆ. ನಟ ಯಶ್ ಅವರು ಶೇರ್ ಮಾಡಿರುವ ಮಲಯಾಳಂ ವರ್ಷನ್ ಸಾಂಗ್ ಪ್ಲೇ ಆಗುತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


