ಸಿನಿಮಾ ಸುದ್ದಿ

ಖುಲಾಯಿಸಿದ ಅದೃಷ್ಟ: ಐತಿಹಾಸಿಕ ಚಿತ್ರದಲ್ಲಿ ನಟಿ ಹರಿಪ್ರಿಯಾ?

ವಿಕ್ಟರಿ 2 ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಹರಿ ಸಂತೋಷ್ ಐತಿಹಾಸಿಕ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು ಈ ಚಿತ್ರದಲ್ಲಿ ನಟಿ ಹರಿಪ್ರಿಯಾ ನಟಿಸಲಿದ್ದಾರೆ ಎಂದು ಹೇಳಲಾಗಿದೆ...

ಖುಲಾಯಿಸಿದ ಅದೃಷ್ಟ: ಐತಿಹಾಸಿಕ ಚಿತ್ರದಲ್ಲಿ ನಟಿ ಹರಿಪ್ರಿಯಾ?
ಹರಿಪ್ರಿಯಾ
Published On :
ವಿಕ್ಟರಿ 2 ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಹರಿ ಸಂತೋಷ್ ಐತಿಹಾಸಿಕ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು ಈ ಚಿತ್ರದಲ್ಲಿ ನಟಿ ಹರಿಪ್ರಿಯಾ ನಟಿಸಲಿದ್ದಾರೆ ಎಂದು ಹೇಳಲಾಗಿದೆ.
ಬಿಎಲ್ ವೇಣು ಅವರ ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕ ಕಾದಂಬರಿ ಆಧಾರಿತ ಚಿತ್ರವನ್ನು ಹರಿ ಸಂತೋಷ್ ನಿರ್ದೇಶನ ಮಾಡುತ್ತಿದ್ದು ಚಿತ್ರಕ್ಕೆ ಬಿಚ್ಚುಗತ್ತಿ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದ ಮೊದಲ ಭಾಗವಾದ ದಳವಾಯಿ ದಂಗೆಯಲ್ಲಿ ಹರಿಪ್ರಿಯಾ ನಟಿಸುವ ಸಾಧ್ಯತೆ ಇದೆ. 
ರಾಜಾವರ್ಧನ ನಾಯಕನಾಗಿ ಅಭಿನಯಿಸುತ್ತಿದ್ದು ಚಿತ್ರದ ನಾಯಕಿ ಪಾತ್ರದ ಅನ್ವೇಷಣೆಯಲ್ಲಿದ್ದ ನಿರ್ದೇಶಕರ ಕಣ್ಣಿಗೆ ಹರಿಪ್ರಿಯಾ ಬಿದ್ದಿದ್ದಾರೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದರಿಂದ ಈ ಪಾತ್ರಕ್ಕೆ ಹರಿಪ್ರಿಯಾ ಸೂಕ್ತ ಎಂದು ನಿರ್ದೇಶಕರು ಹರಿಪ್ರಿಯಾ ಜತೆ ಮಾತುಕತೆ ನಡೆಸಿದ್ದಾರೆ. ಚಿತ್ರದ ಪಾತ್ರದ ಕುರಿತಂತೆ ಹರಿಪ್ರಿಯಾ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.