ಸಿನಿಮಾ ಸುದ್ದಿ

ಅತ್ಯಾಚಾರ ಆರೋಪ: ತಲೆ ಮರೆಸಿಕೊಂಡಿದ್ದ ಸಂಗೀತ ನಿರ್ದೇಶಕ ಕರಣ್ ಮಹದೇವ್ ಬಂಧನ

ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಸಂಗೀತ ನಿರ್ದೇಶಕ ಹಾಗೂ ನಟ ಕರಣ್ ಮಹದೇವ್ಅಲಿಯಾಸ್ ಮಂಜುನಾಥ್ ನನ್ನು ಜ್ಞಾನಭಾರತಿ ಪೊಲೀಸರು ...

ಅತ್ಯಾಚಾರ ಆರೋಪ:  ತಲೆ ಮರೆಸಿಕೊಂಡಿದ್ದ ಸಂಗೀತ ನಿರ್ದೇಶಕ ಕರಣ್ ಮಹದೇವ್ ಬಂಧನ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಸಂಗೀತ ನಿರ್ದೇಶಕ ಹಾಗೂ ನಟ ಕರಣ್ ಮಹದೇವ್ಅಲಿಯಾಸ್ ಮಂಜುನಾಥ್ ನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. 
ಕರಣ್ ಮಹದೇವ್ ಯುವತಿಯನ್ನು ಫೇಸ್‍ಬುಕ್‍ನಲ್ಲಿ ಪರಿಚಯ ಮಾಡಿಕೊಂಡು ಸಂಗೀತ ಹೇಳಿಕೊಡುವುದಾಗಿ ಹೇಳಿದ್ದ. ನಂತರ ಆ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ.
ಕರಣ್ ಮಹದೇವ್ ಯುವತಿಯನ್ನು ಬೆದರಿಸಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಈ ನಡುವೆ ಯುವತಿಗೆ ಬೇರೆ ಯುವಕನ ಜೊತೆ ಮದುವೆ ಫಿಕ್ಸ್ ಆಗಿತ್ತು. ಈ ವಿಷಯವನ್ನು ತಿಳಿದ ಮಂಜುನಾಥ್ ಯುವತಿಯ ಜೊತೆಗಿನ ವಿಡಿಯೋ ತೋರಿಸಿ ಬೆದರಿಸಿದ್ದಾನೆ.
ಈ ಸಂಬಂಧ ಯುವತಿ ಕರಣ್ ಮಹದೇವ್ ವಿರುದ್ಧ  ನವೆಂಬರ್ 27 ರಂದು ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಜ್ಞಾನಭಾರತಿ ಪೊಲೀಸರು ಆರೋಪಿ ಕರಣ್ ಮಹಾದೇವ್‍ನನ್ನು ಬಂಧಿಸಿದ್ದಾರೆ. 
ಕರಣ್ ಮಹದೇವ್ ‘ಗೂಳಿಹಟ್ಟಿ’ ಸಿನಿಮಾ ಸೇರಿದಂತೆ ಹಲವು ಕನ್ನಡ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.