ಕಣ್ ಸನ್ನೆ ಹುಡುಗಿ ಪ್ರಿಯಾ 2018ರಲ್ಲಿ ಅತಿ ಹೆಚ್ಚು ಸರ್ಚಾದ ಸೆಲೆಬ್ರಿಟಿ!
ಒರು ಅಡಾರ್ ಲವ್ ಚಿತ್ರದ ಒಂದೇ ಒಂದು ಕಣ್ ಸನ್ನೆ ದೃಶ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದ....

Published On :
ನವದೆಹಲಿ: ಒರು ಅಡಾರ್ ಲವ್ ಚಿತ್ರದ ಒಂದೇ ಒಂದು ಕಣ್ ಸನ್ನೆ ದೃಶ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅವರು 2018ರಲ್ಲಿ ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚಾದ ಸೆಲೆಬ್ರಿಟಿ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಗೂಗಲ್ ನಲ್ಲಿ ಈ ವರ್ಷ ಅತಿ ಹೆಚ್ಚು ಸರ್ಚಾದ ವ್ಯಕ್ತಿಗಳ ಪೈಕಿ ಪ್ರಿಯಾ ವಾರಿಯಾರ್ ಮೊದಲ ಸ್ಥಾನದಲ್ಲಿದ್ದು, ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಪತಿ ನಿಕ್ ಜೋನಸ್ ಅವರು ನಂತರದ ಸ್ಥಾನದಲ್ಲಿದ್ದಾರೆ ಎಂದು ಎಂದು ಬುಧವಾರ ಗೂಗಲ್ ಇಂಡಿಯಾ ತಿಳಿಸಿದೆ.
ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚಾದ ವ್ಯಕ್ತಿಗಳ ಪೈಕಿ ಪ್ರಿಯಾಂಕಾ ಚೋಪ್ರಾ ಅವರು ನಾಲ್ಕನೆ ಸ್ಥಾನದಲ್ದಿದ್ದು, ಡ್ಯಾನ್ಸರ್ ಸಪ್ನಾ ಚೌಧರಿ ಅವರು ಮೂರನೇ ಹಾಗೂ ಸೋನಂ ಕಪೂರ್ ಅವರ ಪತಿ ಆನಂದ್ ಅಹುಜಾ ಅವರು ಐದನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


