ಸಿನಿಮಾ ಸುದ್ದಿ

ಹಳ್ಳ ಹಿಡಿಯುತ್ತಿದೆ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣ!

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಇದೀಗ ನಟಿ ಶ್ರುತಿ...

ಹಳ್ಳ ಹಿಡಿಯುತ್ತಿದೆ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣ!
ಶ್ರುತಿ ಹರಿಹರನ್, ಅರ್ಜುನ್ ಸರ್ಜಾ
Published On :
ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಇದೀಗ ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣದ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. 
ಈ ಮೀಟೂ ಆರೋಪ ಕರ್ನಾಟಕದಲ್ಲಿ ಸಂಚಲನ ಮೂಡಿಸಿದ್ದರಿಂದ ಪೊಲೀಸರು ಸಹ ಪ್ರಕರಣ ಕುರಿತಂತೆ ಬಿರುಸಿನ ತನಿಖೆಗೆ ಮುಂದಾಗಿದ್ದರು. ಆದರೆ ಇದೀಗ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನ ಬಿ ರಿಪೋರ್ಟ್ ಸಲ್ಲಿಸೋಕೆ ಪೊಲೀಸರು ಮುಂದಾಗಿದ್ದಾರೆ. 
ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ನಂತರ ಪೊಲೀಸರು ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ. 
ಕಾರಣಗಳು?
* ಘಟನೆ ನಡೆದು 2 ವರ್ಷಗಳ ನಂತರ ದೂರು ನೀಡಿರೋದು.
* ಶೂಟಿಂಗ್ ವೇಳೆ ಅರ್ಜುನ್ ಸರ್ಜಾ ಅಶ್ಲೀಲವಾಗಿ ವರ್ತಿಸಿದ್ದರೂ ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.
* ದೇವನಹಳ್ಳಿ ಹೈವೇಯಲ್ಲಿ ರೂಂಗೆ ಕರೆದರೂ ಅನ್ನೋಕು ಸೂಕ್ತ ಸಾಕ್ಷಿಗಳಿಲ್ಲ.
* ಅರ್ಜುನ್ ಸರ್ಜಾ ಶೂಟಿಂಗ್ ನಲ್ಲಿ ವಿಸ್ಮಯ ಚಿತ್ರಕ್ಕೆ ಬೇಕಾದಂತೆ ನಟಿಸಿದೆ ಅಷ್ಟೇ ಅಂತ ಹೇಳಿದ್ದಾರೆ.
* 40 ಜನರನ್ನು ಸಾಕ್ಷಿಗಳನ್ನಾಗಿ ಮಾಡೋಕೆ ಹೊರಟ್ಟಿದ್ದ ಪೊಲೀಸರಿಗೆ ಸಿಕ್ಕಿದ್ದು ಕೇವಲ 10 ಜನ.
* ಯುಬಿ ಸಿಟಿಯಲ್ಲಿ ರೂಂ ಬುಕ್ ಮಾಡಿದ್ದು ನಿಜವಾದ್ರೂ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಯಾವುದೇ ಸಿಸಿಟಿವಿ ಸಾಕ್ಷ್ಯ ಇಲ್ಲ.
* ಶೂಟಿಂಗ್ ನಡೆದ ಜಾಗದಲ್ಲೂ ಯಾವುದೇ ಸಾಂದರ್ಭಿಕ ಸಾಕ್ಷಿಗಳು ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.