ಕೊಲ್ಲೂರು ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ, 'ಕೆಜಿಎಫ್' ಯಶಸ್ಸಿಗಾಗಿ ವಿಶೇಷ ಪೂಜೆ
: ರಾಕಿಂಗ್ ಸ್ಟಾರ್ ಯಶ್ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ....

Published On :
ಕುಂದಾಪುರ: ರಾಕಿಂಗ್ ಸ್ಟಾರ್ ಯಶ್ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ಯಶ್ ಹಾಗೂ "ಕೆಜಿಎಫ್" ಚಿತ್ರತಂಡ ಮೂಕಾಂಬಿಕೆ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದೆ.
ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ "ಕೆಜಿಎಫ್" ಈ ವಾರ (ಡಿಸೆಂಬರ್ 21)ಕ್ಕೆ ಬಿಡುಗಡೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಯಶ್ ತಂಡದ ಜತೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಶನಿವಾರ ರಾತ್ರಿ ಬೆಂಗಳೂರಿನಿಂದ ಹೊರಟ ತಂಡ ಭಾನುವಾರ ಬೆಳಿಗ್ಗೆ ಕೊಲ್ಲೂರಿಗೆ ಆಗಮಿಸಿದ್ದು ಇಲ್ಲಿನ ಪೂಜೆ ಮುಗಿಸಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದೆ.
ನಟ ಯಶ್, ನಿರ್ಮಾಪಕ ವಿಜಯ್ ಕಿರಗಂದೂರ್ ಹಾಗೂ ಸ್ನೇಹಿತರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಚಿತ್ರದ "ಗಲಿ ಗಲಿ" ಹಾಡು ಇದಾಗಲೇ ಮೊದಲ ದಿನವೇ 13 ಮಿಲಿಯನ್ ವ್ಯೂ ಪಡೆದು ದಾಖಲೆ ನಿರ್ಮಿಸಿದೆ. ಶುಕ್ರವಾರ "ಕೆಜಿಎಫ್" ಚಿತ್ರ ಪಂಚ ಭಾಷೆಗಳಲ್ಲಿ ತೆರೆ ಕಾಣತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kollurಕೊಲ್ಲೂರುKollur Mookambika TempleRocking Star Yashರಾಕಿಂಗ್ ಸ್ಟಾರ್ ಯಶ್KGF Kannada filmಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕೆಜಿಎಫ್ ಕನ್ನಡ ಚಿತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


