ಖ್ಯಾತ ಹಿನ್ನೆಲೆ ಗಾಯಕ ಹರಿಹರನ್ ಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ
ಖಾತ ಹಿನ್ನೆಲೆ ಗಾಯಕ, ಪದ್ಮಶ್ರೀ ಪುರಸ್ಕೃತರಾದ ಹರಿಹರನ್ ಅವರಿಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ ಲಭಿಸಿದೆ.

Published On :
ಮೂಡಬಿದಿರೆ: ಖಾತ ಹಿನ್ನೆಲೆ ಗಾಯಕ, ಪದ್ಮಶ್ರೀ ಪುರಸ್ಕೃತರಾದ ಹರಿಹರನ್ ಅವರಿಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ ಲಭಿಸಿದೆ.
ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿವರ್ಷ ನಡೆಸುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಈ ಬಾರಿ 25 ನೇ ವರ್ಷ ಆಚರಿಸುತ್ತಿದೆ. ಈ ಸಾಲಿನ ಕಾರ್ಯಕ್ರಮವು 2019 ಜನವರಿ 4 ರಿಂದ 6 ರವರೆಗೆ ನಡೆಯಲಿದೆ.
ಈ ಸಂದರ್ಭದಲ್ಲಿ ಖ್ಯಾತ ಹಿನ್ನೆಲೆ ಗಾಯಕ ಹರಿಹರನ್ ಅವರೊಗೆ ಅವರಿಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಪ್ರತಿಷ್ಠಾನದ ಮುಖ್ಯಸ್ಥ ಡಾ. ಮೋಹನ್ ಆಳ್ವ ಹೇಳಿದ್ದಾರೆ.
ಹಿಂದಿ , ತಮಿಳು, ಮಲಯಾಳಂ, ಕನ್ನಡ, ಮರಾಠಿ, ಭೋಜಪುರಿ ಮತ್ತು ತೆಲುಗು ಚಿತ್ರರಂಗದ ಹಿನ್ನೆಲೆಗಾಯಕರಾಗಿ ಗುರುತಿಸಿಕೊಂಡಿರುವ ಹರಿಹರನ್ ಪ್ರಸಿದ್ಧ ಗಜಲ್ ಗಾಯಕರೂ, ಮತ್ತು ಭಾರತೀಯ ಫ್ಯೂಷನ್ ಸಂಗೀತದ ಆದ್ಯಪ್ರವರ್ತಕರಲ್ಲಿ ಒಬ್ಬರೂ ಹೌದು ತಿರುವನಂತಪುರಂ ಹರಿಹರನ್ ಅನಂತ ಸುಬ್ರಮಣ್ಯನ್ ಅವರು ಹರಿಹರನ್ ಎಂದೇ ಪ್ರಖ್ಯಾತರಾದವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


