ನಿರ್ದೇಶಕ ಅನೂಪ್ ಭಂಡಾರಿ, ಸುದೀಪ್ ಕಾಂಬಿನೇಷನ್ 'ಬಿಲ್ಲ ರಂಗ ಬಾಷ ' ಪೋಸ್ಟರ್ ಬಿಡುಗಡೆ
ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಿಲ್ಲ ರಂಗ ಬಾಷ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದೆ.

Published On :
ಬೆಂಗಳೂರು: ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ, ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಿಲ್ಲ ರಂಗ ಬಾಷ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದೆ.

ರಂಗಿತರಂಗ ಎಂಬ ಸೂಪರ್ ಹಿಟ್ ಸಿನಿಮಾ ನೀಡಿದ್ದ ನಿರ್ದೇಶಕ ಅನೂಪ್ ಭಂಡಾರಿ ಈಗ ಕಿಚ್ಚನ ಜೊತೆ ಕೈ ಜೋಡಿಸಿದ್ದಾರೆ. ಸಿನಿಮಾದ ಟೈಟಲ್ ವಿಭಿನ್ನವಾಗಿದ್ದು, ಸುದೀಪ್ ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಅಂದಹಾಗೆ, 18 ವರ್ಷಗಳ ಹಿಂದೆಯೇ ಸುದೀಪ್ ಗಾಗಿ ಅನೂಪ್ ಕಥೆ ಬರೆದಿದ್ದರಂತೆ! ಆದರೆ, ಸಿನಿಮಾ ಮಾಡಲು ಸಾಧ್ಯವಾಗಿರಲಿಲ್ಲವಂತೆ. ಕಿರುಚಿತ್ರದ ಬಿಡುಗಡೆ ಕಾರ್ಯಕ್ರಮದಲ್ಲಿ ಸುದೀಪ್ ಗಮನಕ್ಕೆ ತರಲಾಗಿ, ನನ್ನ ಕನಸು ಈಗ ನೆರವೇರುತ್ತಿದೆ ಎಂದು ಅನೂಪ್ ಭಂಡಾರಿ ಹೇಳಿಕೊಂಡಿದ್ದಾರೆ.
ಅನೂಪ್ ಭಂಡಾರಿ ಜೊತೆಗೆ ಚಿತ್ರ ಮಾಡುತ್ತಿರುವ ಬಗ್ಗೆ ಈ ಹಿಂದೆ ಸುದೀಪ್ ಟ್ವಿಟರ್ ನಲ್ಲಿ ಸಂತಸ ಹಂಚಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿಡುಗಡೆSudeepಸುದೀಪ್EntertainmentAnup Bhandariಅನೂಪ್ ಭಂಡಾರಿBilla Ranga Baashaa PosterReleased ಮನರಂಜನೆಬಿಲ್ಲ ರಂಗ ಬಾಷ ಪೋಸ್ಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


