ರಾಕಿಂಗ್ ಸ್ಟಾರ್ ಯಶ್ ಗಾಗಿ ವಿಶೇಷ ವಿಡಿಯೋ ಬಿಡುಗಡೆ ಮಾಡಿದ ತಮಿಳು ನಟ ವಿಶಾಲ್!
ಕಳೆದ ಶುಕ್ರವಾರ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನೆರೆಯ ರಾಜ್ಯ ತಮಿಳುನಾಡಿನಲ್ಲಿ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಚೆನ್ನೈ: ಕಳೆದ ಶುಕ್ರವಾರ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನೆರೆಯ ರಾಜ್ಯ ತಮಿಳುನಾಡಿನಲ್ಲಿ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಆರಂಭಿಕವಾಗಿ ಕೇವಲ 100 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ ಈಗ 300 ಥಿಯೇಟರ್ ಗಳಲ್ಲಿ ಉತ್ತಮ ಲಾಭಂಶದೊಂದಿಗೆ ಮುನ್ನುಗುತ್ತಿದ್ದು, ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದ್ದ ವಿಶಾಲ್ ಫಿಲ್ಮಿ ಫ್ಯಾಕ್ಟರಿ ನಿರ್ದೇಶಕ, ನಟ ವಿಶಾಲ್ ತುಂಬಾ ಖುಷಿಯಾಗಿದ್ದಾರೆ.
ಇದೇ ಖುಷಿಯಲ್ಲಿ ತನ್ನ ಆತ್ಮೀಯ ಸ್ನೇಹಿತ, ಕನ್ನಡದ ರಾಕಿಂಗ್ ಸ್ಟಾರ್ ಯಶ್ ಗಾಗಿ ವಿಶೇಷವಾದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಯಶ್ ಬೆಳೆದು ಬಂದ ರೀತಿ ಹಾಗೂ ಅವರು ಯಶೋ ಮಾರ್ಗ ಸಂಸ್ಥೆ ಮೂಲಕ ಕರ್ನಾಟಕದಲ್ಲಿ ಕೈಗೊಂಡಿರುವ ಸಮಾಜ ಸೇವಾ ಕಾರ್ಯಗಳನ್ನು ತಮಿಳು ಜನರಿಗೆ ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ.
ಸುಮಾರು ಐದು ನಿಮಿಷಗಳ ಈ ವಿಡಿಯೋದಲ್ಲಿ ಯಶ್ ಬಾಲ್ಯ ಹಾಗೂ ಅವರ ಆರಂಭಿಕ ಹಂತದ ಚಿತ್ರಗಳು, ನಂತರ ಗೂಗ್ಲಿ, ರಾಜಹುಲಿ, ಗಜಕೇಸರಿ, ಮಿಸಸ್ ಅಂಡ್ ಮಿಸ್ಟರ್ ರಾಮಾಚಾರಿ ಮತ್ತಿತರ ಚಿತ್ರಗಳ ವಿಡಿಯೋವನ್ನು ಬಳಸಿ, ಚಿತ್ರರಂಗದಲ್ಲಿ ಯಾವುದೇ ಗಾಡ್ ಪಾದರ್ ಇಲ್ಲದೆ ಯಶ್ ಉತ್ತುಂಗದ ಶಿಖರಕ್ಕೇರಿದ ರೀತಿಯನ್ನು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


