ಎಸ್ ನಾರಾಯಣ್ ನಿರ್ದೇಶನದಲ್ಲಿ ಬಿಗ್‌ಬಾಸ್ ಸ್ಪರ್ಧಿ ಶೃತಿ ಪ್ರಕಾಶ್ ಸ್ಯಾಂಡಲ್‌ವುಡ್‌ಗೆ?
ಕನ್ನಡದ ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಶೃತಿ ಪ್ರಕಾಶ್ ಅವರಿಗೆ ಅದೃಷ್ಟದ ಬಾಗಿಲು ತೆರದಂತಿದೆ. ಕಳೆದ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಹಲವು ಪ್ರತಿಭೆಗಳ...

Published On :
ಕನ್ನಡದ ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಶೃತಿ ಪ್ರಕಾಶ್ ಅವರಿಗೆ ಅದೃಷ್ಟದ ಬಾಗಿಲು ತೆರದಂತಿದೆ. ಕಳೆದ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಹಲವು ಪ್ರತಿಭೆಗಳ ಅನಾವರಣಗೊಂಡಿದ್ದು ಅದರಲ್ಲಿ ಬಿಗ್‌ಬಾಸ್ ಅಂತಿಮ ಸುತ್ತಿನ ಸ್ಪರ್ಧಿ ಶೃತಿ ಪ್ರಕಾಶ್ ಸಹ ಒಬ್ಬರು.
ಇದೀಗ ಶೃತಿ ಪ್ರಕಾಶ್ ಅವರಿಗೆ ಸ್ಯಾಂಡಲ್‌ವುಡ್ ನಿಂದ ಹಲವು ಆಫರ್ ಗಳು ಬರುತ್ತಿವೆಯಂತೆ. ಇದರಲ್ಲಿ ಪ್ರಮುಖವಾಗಿ ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರು ತಮ್ಮ ಮುಂದಿನ ನಿರ್ದೇಶನದ ಚಿತ್ರಕ್ಕೆ ಶೃತಿ ಪ್ರಕಾಶ್ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಎಲ್ಲಾ ಅಂದುಕೊಂಡಂತೆ ಆದರೆ ಎಸ್ ನಾರಾಯಣ್ ನಿರ್ದೇಶನದ ಚಿತ್ರದ ಮೂಲಕ ಶೃತಿ ಪ್ರಕಾಸ್ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಲಿದ್ದಾರೆ. ಶೃತಿ ಪ್ರಕಾಶ್ ಬೆಳಗಾವಿಯಲ್ಲಿ ವಿದ್ಯಾಬ್ಯಾಸ ಮುಗಿಸಿದ್ದು ಮುಂಬೈನಲ್ಲಿ ನೆಲೆಸಿದ್ದಾರೆ. ಗಾಯಕಿಯಾಗಿರುವ ಶೃತಿ ಹಿಂದಿಯ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.
ಪುತ್ರ ಪಂಕಜ್ ಗಾಗಿ ಎಸ್ ನಾರಾಯಣ್ ಈ ಚಿತ್ರ ಮಾಡುತ್ತಿದ್ದು ಚಿತ್ರಕ್ಕೆ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


