ಸಿನಿಮಾ ಸುದ್ದಿ

ತೆಲುಗು ಹಾಸ್ಯನಟ ಗುಂಡು ಹನುಮಂತರಾವ್ ವಿಧಿವಶ

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಗುಂಡು ಹನುಮಂತರಾವ್ (61) ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ...

ತೆಲುಗು ಹಾಸ್ಯನಟ ಗುಂಡು ಹನುಮಂತರಾವ್ ವಿಧಿವಶ
ಗುಂಡು ಹನುಮಂತರಾವ್
Published On :
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಗುಂಡು ಹನುಮಂತರಾವ್ (61) ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. 
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಬೆಳಗಿನ ಜಾವ 3.15ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಸೇಂಟ್ ಥೆರೇಸಾ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರೊಳಗಾಗಲೆ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಡಯಾಲಿಸೀಸ್ ಮಾಡಲಾಗುತ್ತಿತ್ತು.
1956 ಅಕ್ಟೋಬರ್ 10ರಂದು ವಿಜಯವಾಡದಲ್ಲಿ ಜನಿಸಿದ ಅವರು ತನ್ನ 18ನೇ ವಯಸ್ಸಿನಲ್ಲಿ ರಂಗಭೂಮಿಗೆ ಪ್ರವೇಶಿಸಿ, ಬಳಿಕ 'ಅಹಾ ನಾ ಪೆಳ್ಳಂಟ' ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ತನ್ನದೇ ಆದಂತಹ ಕಾಮಿಡಿ ಮೂಲಕ ನಗಿಸುತ್ತಿದ್ದ ಹನುಮಂತರಾವ್  ಪತ್ನಿ ಹಾಗೂ ಒಬ್ಬ ಪುತ್ರನ ಜೊತೆಗೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.