ನಟಿ ಪ್ರಿಯಾ ವಾರಿಯರ್ ವಿರುದ್ದದ ಎಲ್ಲಾ ತನಿಖೆಗೆ 'ಸುಪ್ರೀಂ' ತಡೆಯಾಜ್ಞೆ
ಮಲಯಳಂನ ಒರು ಆದಾರ್ ಲವ್ ಚಿತ್ರದ ಹಾಡಿನ ಕಣ್ಣು ಮಿಟುಕಿಸುವ ದೃಶ್ಯದ ಮೂಲಕ ಲಕ್ಷಾಂತರ ಪಡ್ಡೆ ಹುಡುಗರ ಹೃದಯ ಕದ್ದಿದ್ದ ನಟಿ ಪ್ರಿಯಾ ವಾರಿಯರ್ ವಿರುದ್ಧದ ಎಲ್ಲಾ ಕ್ರಿಮಿನಲ್ ತನಿಖೆಗಳಿಗೂ ಸುಪ್ರೀಂಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ...

Published On :
ನವದೆಹಲಿ: ಮಲಯಳಂನ ಒರು ಆಡಾರ್ ಲವ್ ಚಿತ್ರದ ಹಾಡಿನ ಕಣ್ಣು ಮಿಟುಕಿಸುವ ದೃಶ್ಯದ ಮೂಲಕ ಲಕ್ಷಾಂತರ ಪಡ್ಡೆ ಹುಡುಗರ ಹೃದಯ ಕದ್ದಿದ್ದ ನಟಿ ಪ್ರಿಯಾ ವಾರಿಯರ್ ವಿರುದ್ಧದ ಎಲ್ಲಾ ಕ್ರಿಮಿನಲ್ ತನಿಖೆಗಳಿಗೂ ಸುಪ್ರೀಂಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.
ಒರು ಆಡಾರ್ ಲವ್ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ಪ್ರಿಯಾ ವಾರಿಯರ್ ವಿರುದ್ಧ ದಾಖಲಾಗಿದ್ದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಗೂ ಸುಪ್ರೀಂಕೋರ್ಟ್ ತಡೆ ನೀಡಿದೆ.
ಚಿತ್ರದ ಹಾಡೂ ಹಾಗೂ ಚಿತ್ರದ ತಂಡದ ವಿರುದ್ಧ ಹೈದರಾಬಾದ್ ನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಟಿ ಪ್ರಿಯಾ ಸೇರಿದಂತೆ ಚಿತ್ರ ತಂಡದ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು.
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್'ನ್ನು ರದ್ದುಗೊಳಿಸುವಂತೆ ಕೋರಿ ನಟಿ ಪ್ರಿಯಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದರಂತೆ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯವು ಪ್ರಿಯಾ ವಿರುದ್ಧ ದಾಖಲಾಗಿದ್ದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಗೂ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್FIRಎಫ್ಐಆರ್Oru Adaar LovePriya Prakash Varrierಪ್ರಿಯಾ ಪ್ರಕಾಶ್ ವಾರಿಯಲ್ಒರು ಆಡಾರ್ ಲವ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


