ಸುಪ್ರೀಂಕೋರ್ಟ್ ಆದೇಶ ನನಗೆ ಸಂತಸ ತಂದಿದೆ: ನಟಿ ಪ್ರಿಯಾ ಪ್ರಕಾಶ್ ವಾರಿಯರ್
ತಮ್ಮ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳಿಗೂ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ತಮಗೆ ಸಂತಸ ತಂದಿದೆ ಎಂದು 'ಒರು ಅಡಾರ್ ಲವ್' ಚಿತ್ರದ ನಾಯಕಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಹೇಳಿದ್ದಾರೆ.

Published On :
ನವದೆಹಲಿ: ತಮ್ಮ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳಿಗೂ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ತಮಗೆ ಸಂತಸ ತಂದಿದೆ ಎಂದು 'ಒರು ಅಡಾರ್ ಲವ್' ಚಿತ್ರದ ನಾಯಕಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಹೇಳಿದ್ದಾರೆ.
'ಒರು ಅಡಾರ್ ಲವ್' ಚಿತ್ರದ ಟ್ರೈಲರ್ ಮೂಲಕ ರಾತ್ರೋ ರಾತ್ರಿ ಖ್ಯಾತಿ ಪಡೆದಿದ್ದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ವಿರುದ್ಧ ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಹಲವೆಡೆ ದೂರು ದಾಖಲಾಗಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ನಟಿ ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದು ಮಾಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಿನ್ನೆ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳಿಗೂ ತಡೆ ನೀಡಿತ್ತು.
ಅಲ್ಲದೆ ಭವಿಷ್ಯದಲ್ಲೂ ಚಿತ್ರದ ನಾಯಕಿ ವಿರುದ್ಧ ಯಾವುದೇ ರೀತಿಯ ಎಫ್ ಐಆರ್ ದಾಖಲಿಸಬಾರದು ಎಂದು ಆದೇಶ ನೀಡಿದೆ.
ಈ ಹಿನ್ನಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ನಟಿ ಪ್ರಿಯಾ, ಸುಪ್ರೀಂ ಕೋರ್ಟ್ ಆದೇಶ ನನಗೆ ನೆಮ್ಮದಿ ತಂದಿದೆ. ನಿಜಕ್ಕೂ ನಾನು ಆದೇಶದಿಂದ ಸಂತೋಷಗೊಂಡಿದ್ದೇನೆ. ಈಗಷ್ಟೇ ನಾವು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದೇವೆ. ಚಿತ್ರ ತೆರೆಕಾಣುವ ಮುನ್ನವೇ ಚಿತ್ರದ ವಿರುದ್ಧ ಮತ್ತು ನನ್ನ ವಿರುದ್ಧ ದೂರು ದಾಖಲಾಗುವುದು ನಿಜಕ್ಕೂ ಆತಂಕಕಾರಿ ಬೆಳವಣಿಯಾಗಿರುತ್ತದೆ. ದೂರಿನ ವಿಚಾರ ತಿಳಿದ ಕೂಡಲೇ ನಾನು ಸಾಕಷ್ಟು ಆತಂಕಗೊಂಡಿದ್ದೆ. ಆದರೆ ಈ ಹಂತದಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲಿಚ್ಛಿಸುತ್ತೇನೆ ಎಂದು ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್Mollywoodಮಾಲಿವುಡ್Oru Adaar LovePriya Prakash Varrierಪ್ರಿಯಾ ಪ್ರಕಾಶ್ ವಾರಿಯರ್ಒರು ಅಡಾರ್ ಲವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


