ನೀರವ್ ಮೋದಿಯ ಪ್ರಚಾರ ರಾಯಭಾರಿಯಿಂದ ಹಿಂದೆ ಸರಿದ ಪ್ರಿಯಾಂಕಾ ಚೋಪ್ರಾ
ಉದ್ಯಮಿ ನೀರವ್ ಮೋದಿಯವರ ಜ್ಯುವೆಲ್ಲರಿ ಉತ್ಪನ್ನಗಳ ಪ್ರಚಾರ ರಾಯಭಾರಿಯಿಂದ ....

ನವದೆಹಲಿ: ಉದ್ಯಮಿ ನೀರವ್ ಮೋದಿಯವರ ಜ್ಯುವೆಲ್ಲರಿ ಉತ್ಪನ್ನಗಳ ಪ್ರಚಾರ ರಾಯಭಾರಿಯಿಂದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಿಂದೆ ಸರಿದಿದ್ದಾರೆ. ಈ ವಿಷಯವನ್ನು ಪ್ರಿಯಾಂಕಾ ಅವರ ವಕ್ತಾರರು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಪೋತ್ರಾ ಜೊತೆಗೆ ನೀರವ್ ಮೋದಿಯವರ ಕಂಪೆನಿಯ ಜ್ಯುವೆಲ್ಲರಿ ಜಾಹಿರಾತುಗಳಲ್ಲಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಂಡಿದ್ದರು.
ನೀರವ್ ಮೋದಿ ವಿರುದ್ಧ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಗುತ್ತಿಗೆಯನ್ನು ಪ್ರಿಯಾಂಕಾ ಚೋಪ್ರಾ ರದ್ದುಪಡಿಸಿದ್ದಾರೆ ಎಂದು ಅವರ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದ ನಟ ಸಿದ್ದಾರ್ಥ್ ಮಲ್ಹೋತ್ರಾ, ಬ್ರಾಂಡ್ ಜೊತೆಗೆ ತಮ್ಮ ಗುತ್ತಿಗೆ ಅವಧಿ ಮುಗಿದಿರುವುದರಿಂದ ತಾವು ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 11,300 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೀರವ್ ಮೋದಿ ತನಿಖೆ ಎದುರಿಸುತ್ತಿದ್ದಾರೆ. ಬ್ಯಾಂಕು ಅವರಿಂದ ಸಾಲವನ್ನು ಹಿಂಪಡೆಯಲು ಪ್ರಯತ್ನಿಸುತ್ತಿದೆ.
ಸರಿಯಾದ ವಿಧಾನವನ್ನು ಅನುಸರಿಸದೆ ಪಡೆದಿರುವ 11,300 ಕೋಟಿ ರೂಪಾಯಿಗಳನ್ನು ಹಿಂತಿರುಗಿಸಲು ಸೂಕ್ತ ಯೋಜನೆಯನ್ನು ಅಳವಡಿಸಿಕೊಳ್ಳುವಂತೆ ಪಂಜಾಬ್ ನ್ಯಾಷನಲ್ ಬ್ಯಾಂಕು ನೀರವ್ ಮೋದಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


