ಮತ್ತೆ ಒಟ್ಟಿಗೆ ತೆರೆ ಮೇಲೆ ಬರುವ ಉತ್ಸಾಹದಲ್ಲಿ ಕೆಂಡಸಂಪಿಗೆ ಜೋಡಿ
ನಿರ್ದೇಶಕ ಸೂರಿಯವರ ಕೆಂಡಸಂಪಿಗೆ ಚಿತ್ರ ವಿಕ್ಕಿ ಮತ್ತು ಮಾನ್ವಿತಾ ಹರೀಶ್ ....

Published On :
ನಿರ್ದೇಶಕ ಸೂರಿಯವರ ಕೆಂಡಸಂಪಿಗೆ ಚಿತ್ರ ವಿಕ್ಕಿ ಮತ್ತು ಮಾನ್ವಿತಾ ಹರೀಶ್ ಅವರ ಸಿನಿಮಾ ವೃತ್ತಿಗೆ ಒಳ್ಳೆಯ ಆರಂಭ ನೀಡಿತ್ತು. ಇದೀಗ ಮತ್ತೊಮ್ಮೆ ಇಬ್ಬರೂ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸ್ವತಃ ಅವರೇ ಸಾಮಾಜಿಕ ಮಾಧ್ಯಮದಲ್ಲಿ ದೃಢಪಡಿಸಿದ್ದಾರೆ.
ತಮ್ಮ ಮೊದಲ ಚಿತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಅದೇ ಹುರಿಪಿನಲ್ಲಿ ಇಬ್ಬರೂ ಮತ್ತೊಮ್ಮೆ ಬೆಳ್ಳಿ ಪರದೆ ಮೇಲೆ ಮೋಡಿ ಮಾಡಲು ಮುಂದಾಗಿದ್ದಾರೆ. ಹಲವು ಚಿತ್ರಕಥೆಗಳನ್ನು ಕೇಳುವುದರಲ್ಲಿ ತಲ್ಲೀನರಾಗಿರುವ ವಿಕ್ಕಿ ಮತ್ತು ಮಾನ್ವಿತಾ ಹರೀಶ್ ಸದ್ಯದಲ್ಲಿಯೇ ತಾವು ನಟಿಸುತ್ತಿರುವ ಚಿತ್ರ ಮತ್ತು ನಿರ್ದೇಶಕರ ಬಗ್ಗೆ ವಿವರ ನೀಡಲಿದ್ದಾರೆ ಎಂಬುದು ಅವರ ಅಭಿಮಾನಿಗಳ ಆಶಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


