ನಾನು ಎಲ್ಲೇ ಹೋದರೂ ಈ ಸ್ವಚ್ಛತೆ, ಶುದ್ಧೀಕರಣ ಮುಂದುವರಿಸುತ್ತೀರಾ?: ಬಿಜೆಪಿಗೆ ಪ್ರಕಾಶ್ ರೈ ಪ್ರಶ್ನೆ
ನಾನು ಎಲ್ಲಿಗೇ ಹೋದರೂ ಈ ಸ್ವಚ್ಛತೆ ಮತ್ತು ಶುದ್ಧೀಕರಣ ಸೇವೆಯನ್ನು ನೀವು ಹೀಗೆಯೇ ಮುಂದುವರಿಸುತ್ತೀರಾ? ಎಂದು ದಕ್ಷಿಣ ಭಾರತದ ಖ್ಯಾತ....

Published On :
ಬೆಂಗಳೂರು: ನಾನು ಎಲ್ಲಿಗೇ ಹೋದರೂ ಈ ಸ್ವಚ್ಛತೆ ಮತ್ತು ಶುದ್ಧೀಕರಣ ಸೇವೆಯನ್ನು ನೀವು ಹೀಗೆಯೇ ಮುಂದುವರಿಸುತ್ತೀರಾ? ಎಂದು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರು ಮಂಗಳವಾರ ಬಿಜೆಪಿ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.
ಕಳೆದ ಶನಿವಾರ ಶಿರಸಿಯ ರಾಘವೇಂದ್ರ ಮಠದಲ್ಲಿ ಪ್ರಕಾಶ್ ರೈ ಅವರು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆ ಹಾಗೂ ಮಠದ ಆವರಣವನ್ನು ಬಿಜೆಪಿ ಕಾರ್ಯಕರ್ತರು ನಿನ್ನೆ ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದರು. ಈ ಕುರಿತು ಇಂದು ಟ್ವೀಟ್ ಮಾಡಿರುವ ಪ್ರಕಾಶ್ ರೈ, ನಾನು ಶಿರಸಿ ಪಟ್ಟಣದಲ್ಲಿ ಮಾತನಾಡಿದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸಿ, ಶುದ್ಧೀಕರಿಸುತ್ತಿದ್ದಾರೆ... ಹಸುವಿನ ಮೂತ್ರವನ್ನು(ದೈವಿಕ ಗೋಮೂತ್ರ) ಚಿಮುಕಿಸುವ ಮೂಲಕ......, ನಾನು ಎಲ್ಲಿಗೇ ಹೋಗುತ್ತಿದ್ದರೂ ಈ ಶುದ್ಧೀಕರಣ ಮತ್ತು ಸ್ವಚ್ಛತೆ ಸೇವೆಯನ್ನು ನೀವು ಮುಂದುವರಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
BJP workers cleaning and purifying the stage ..from where I spoke in Sirsi town ...by sprinkling cow urine (divine gomoothra)...
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


