ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಹುಭಾಷಾ ನಟಿ ಭಾವನಾ; ನಿರ್ಮಾಪಕ ನವೀನ್ ಜೊತೆ ವಿವಾಹ
ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ತಾರೆ ಭಾವನಾ ಮತ್ತು ...

Published On :
ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ತಾರೆ ಭಾವನಾ ಮತ್ತು ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕ ನವೀನ್ ಅವರ ಮದುವೆ ಇಂದು ಬೆಳಗ್ಗೆ 9.30ಕ್ಕೆ ಕೇರಳದ ತ್ರಿಶೂರ್ ನಲ್ಲಿರುವ ತಿರುವಂಬಾಡಿ ದೇವಸ್ಥಾನದಲ್ಲಿ ನೆರವೇರಿತು.
ವಿವಾಹದಲ್ಲಿ ಎರಡೂ ಕುಟುಂಬಸ್ಥರ ಸದಸ್ಯರು ಮತ್ತು ಆಪ್ತ ಸ್ನೇಹಿತ ವರ್ಗದವರು ಭಾಗವಹಿಸಿದ್ದರು. ಭಾವನ ಮೂಲತಃ ತ್ರಿಶೂರ್ ನವರಾಗಿದ್ದಾರೆ.
ಆಭರಣ ಬಣ್ಣದ ಲೇಬಲ್'ಎಮ್ ಸೀರೆಯಲ್ಲಿ ಮಿಂಚಿದ ವಧು ಭಾವನಾ ಅದಕ್ಕೆ ಒಪ್ಪುವ ಟೆಂಪಲ್ ಜ್ಯುವೆಲ್ಲರಿಯನ್ನು ಧರಿಸಿ ಸುಂದರವಾಗಿ ಕಾಣುತ್ತಿದ್ದರು.
ಇಂದು ಸಂಜೆಯೇ ತ್ರಿಶೂರ್ ನ ಲುಲು ಕನ್ವೆಷನ್ ಸೆಂಟರ್ನಲ್ಲಿ ನಿಗದಿಯಾಗಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ಚಿತ್ರೋದ್ಯಮದವರು ಮತ್ತು ಇತರ ವಿಐಪಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ನಟಿ ಭಾವನಾ ಮತ್ತು ನಿರ್ಮಾಪಕ ನವೀನ್ ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಕಳೆದ ವರ್ಷ ಮಾರ್ಚ್ 9ರಂದು ತ್ರಿಶೂರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರ ನಿಶ್ಚಿತಾರ್ಥ ಕಳೆದ ವರ್ಷದ ಮಾರ್ಚ್ನಲ್ಲೇ ನೆರವೇರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


