ಸಿನಿಮಾ ಸುದ್ದಿ

ಇನ್ಸ್ ಪೆಕ್ಟರ್ ವಿಕ್ರಮನಾಗಿ ಪ್ರಜ್ವಲ್ ದೇವರಾಜ್

ವಿಖ್ಯಾತ್ ಪ್ರೊಡಕ್ಷನ್ ಹೌಸ್ ನಲ್ಲಿ ಎರಡನೇ ಸಿನಿಮಾ ತಯಾರಾಗುತ್ತಿದ್ದು ಪ್ರಜ್ವಲ್ ದೇವರಾಜ್ ...

ಇನ್ಸ್ ಪೆಕ್ಟರ್ ವಿಕ್ರಮನಾಗಿ ಪ್ರಜ್ವಲ್ ದೇವರಾಜ್
ಪ್ರಜ್ವಲ್ ದೇವರಾಜ್
Published On :
ವಿಖ್ಯಾತ್ ಪ್ರೊಡಕ್ಷನ್ ಹೌಸ್ ನಲ್ಲಿ ಎರಡನೇ ಸಿನಿಮಾ ತಯಾರಾಗುತ್ತಿದ್ದು ಪ್ರಜ್ವಲ್ ದೇವರಾಜ್ ಅದಕ್ಕೆ ನಾಯಕ. ವಿಖ್ಯಾತ್ ಪ್ರೊಡಕ್ಷನ್ ಹೌಸ್ ಈಗಾಗಲೇ ಪುಷ್ಪಕ ವಿಮಾನ ಚಿತ್ರವನ್ನು ನಿರ್ಮಾಣ ಮಾಡಿದೆ. 
ಈ ಚಿತ್ರಕ್ಕೆ ನರಸಿಂಹ ನಿರ್ದೇಶಕರು. ಅವರ ಚೊಚ್ಚಲ ನಿರ್ದೇಶನದ ಸಿನಿಮಾವಿದು. ಇನ್ಸ್ ಪೆಕ್ಟರ್ ವಿಕ್ರಮ್ ಎಂದು ಹೆಸರಿಡಲಾಗಿದೆ. ಇಲ್ಲಿ ಪ್ರಜ್ವಲ್ ಪೊಲೀಸ್ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಇತ್ತೀಚೆಗೆ ಚಿತ್ರದ ಮುಹೂರ್ತ ಸರಳವಾಗಿ ನೆರವೇರಿತು. ಇದೇ 27ರಿಂದ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಮೊದಲ ಶೆಡ್ಯೂಲ್ ನಲ್ಲಿ ನಾಯಕನ ಪಾತ್ರವನ್ನು ಮಾತ್ರ ಚಿತ್ರೀಕರಿಸುತ್ತಿದ್ದು, ಚಿತ್ರೀಕರಣ ಬೆಂಗಳೂರಿನಲ್ಲಿಯೇ ನಡೆಯಲಿದೆ. 
ಫೆಬ್ರವರಿ 10ರಿಂದ ಗೋವಾದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅಷ್ಟರೊಳಗೆ ಚಿತ್ರದ ನಾಯಕಿಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ ಎನ್ನುತ್ತಾರೆ ನಿರ್ಮಾಪಕ ವಿಖ್ಯಾತ್. 
ಚರಣ್ ರಾಜ್ ಅವರ ಸಂಗೀತ ಚಿತ್ರಕ್ಕಿದ್ದು, ನವೀನ್ ಕುಮಾರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.