ರಾಜಸ್ತಾನದ ಮರುಭೂಮಿಯಲ್ಲಿ ಫೋಟೋ ಶೂಟ್ ಮೂಲಕ 'ಭರಾಟೆ' ಆರಂಭ!
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಶ್ರೀಲೀಲಾ ನಟನೆಯ ಭರಾಟೆ ಚಿತ್ರದ ಕುರಿತಂತೆ ನಿರೀಕ್ಷೆಗಳು ಹೆಚ್ಚಾಗಿದ್ದು ಬ್ಯಾಕ್ ಟು ಬ್ಯಾಕ್ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿರುವ ಚೇತನ್...

Published On :
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಶ್ರೀಲೀಲಾ ನಟನೆಯ ಭರಾಟೆ ಚಿತ್ರದ ಕುರಿತಂತೆ ನಿರೀಕ್ಷೆಗಳು ಹೆಚ್ಚಾಗಿದ್ದು ಬ್ಯಾಕ್ ಟು ಬ್ಯಾಕ್ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿರುವ ಚೇತನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ರಾಜಸ್ತಾನದ ಮರುಭೂಮಿಯಲ್ಲಿ ಸುಡುಬಿಸಿಲಿನಲ್ಲೂ ನಟನಿಗಾಗಿ ವಿಶೇಷ ಫೋಟೋ ಶೂಟ್ ಮಾಡಲಾಗುತ್ತಿದೆ. ಇನ್ನು ಈ ಪ್ರದೇಶದಲ್ಲಿ ಫೋಟೋ ಶೂಟ್ ಮಾಡಲಾಗುತ್ತಿರುವ ಮೊದಲ ಕನ್ನಡ ಚಿತ್ರ ಎಂದು ನಿರ್ದೇಶಕ ಚೇತನ್ ಕುಮಾರ್ ಹೇಳಿದ್ದಾರೆ.
ಚಿತ್ರ ತಂಡದ ಕೆಲವರು ಅದಾಗಲೇ ರಾಜಸ್ತಾನದ ಮರುಭೂಮಿಗೆ ತೆರಳಿದ್ದು ಫೋಟೋ ಶೂಟ್ ಮಾಡಲಾಗುತ್ತಿದೆ. ಭುವನ್ ಗೌಡ ಫೋಟೋ ಶೂಟ್ ಮಾಡುತ್ತಿದ್ದಾರೆ. ಉತ್ತಮ ಫೋಟೋಗಳು ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡುತ್ತವೆ ಎಂಬುದು ಚಿತ್ರತಂಡದ ಮಾತು.
ರಾಜಸ್ತಾನದಲ್ಲಿ 20 ದಿನಗಳ ಶೂಟಿಂಗ್ ಗೆ ಚಿತ್ರ ತಂಡ ಯೋಜನೆ ಹಾಕಿಕೊಂಡಿದ್ದು ಇದರ ಪೂರ್ವಭಾವಿಯಾಗಿ ಹಲವು ಅದಾಗಲೇ ರಾಜಸ್ತಾನವನ್ನು ಸೇರಿಕೊಂಡಿದ್ದಾರೆ. ಚಿತ್ರವನ್ನು ಸುಪ್ರೀತ್ ಎಂಬುವರು ನಿರ್ಮಾಣ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SandalwoodRajasthanರಾಜಸ್ತಾನಚೇತನ್ ಕುಮಾರ್ಶ್ರೀಮುರಳಿಸ್ಯಾಂಡಲ್ವುಡ್Chethan KumarSriimuraliSreeleelaಶ್ರೀಲೀಲಾಭರಾಟೆBharaate
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


