ಪುನೀತ್ ಅಭಿನಯದ ನಟಸಾರ್ವಭೌಮ ಚಿತ್ರಕ್ಕೆ ಸಂಕಷ್ಟ, ದಕ್ಷಿಣ ಕಾಶಿಯಲ್ಲಿ ಚಿತ್ರೀಕರಣಕ್ಕೆ ತಡೆ!
ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಸಂಕಷ್ಟ ಎದುರಾಗಿದೆ...

Published On :
ಬಾದಾಮಿ: ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಸಂಕಷ್ಟ ಎದುರಾಗಿದೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಐತಿಹಾಸಿಕ ಕೇಂದ್ರ ಮಹಾಕೂಟದಲ್ಲಿ ಚಿತ್ರದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿತ್ತು. ಮಹಾಕೂಟೇಶ್ವರ ದೇವಾಲಯದ ಪಕ್ಕದಲ್ಲಿಯೇ ಇರುವ ಪುಷ್ಕರಣಿಯಲ್ಲಿ ಬೃಹತ್ ಸೆಟ್ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಪುಷ್ಕರಣಿಯಲ್ಲಿ ಸೆಟ್ ಆಗಿರುವುದರಿಂದ ನೀರಿನ ಸೆಲೆಗೆ ಕುತ್ತುಂಟಾಗುತ್ತದೆ ಎಂದು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಸ್ಥಳೀಯರ ತೀವ್ರ ವಿರೋಧದ ನಡುವೆ ಪುರಾತತ್ವ ಇಲಾಖೆ ಮಹಾಕೊಟೇಶ್ವರದಲ್ಲಿ ಚಿತ್ರದ ಚಿತ್ರೀಕರಣ ನಡೆಸದಂತೆ ಚಿತ್ರತಂಡಕ್ಕೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪುನೀತ್ ರಾಜಕುಮಾರ್SandalwoodPunith Rajkumarರಚಿತಾ ರಾಮ್Pawan wadeyarಪವನ್ ಒಡೆಯರ್ಸ್ಯಾಂಡಲ್ವುಡ್ನಟಸಾರ್ವಭೌಮNatasarwaboumaRajitha Ram
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


