'ನಟಸಾರ್ವಭೌಮ' ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ದಸರಾ ಗಿಪ್ಟ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರವನ್ನು ದಸರಾ ವೇಳೆಯಲ್ಲಿ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡದ್ದಾಗಿದೆ. ಪುನೀತ್ ರಾಜ್ ಕುಮಾರ್ ಮುಂದಿನ ಚಿತ್ರ ವೀಕ್ಷಣೆಗಾಗಿ ಕಾಯುತ್ತಿರುವ ಅವರ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿಯಾಗಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣ ಭರದಿಂದ ಸಾಗಿರುವಂತೆ ಚಿತ್ರ ಬಿಡುಗಡೆಗೆ ಸ್ವಲ್ಪ ವಿರಾಮ ಪಡೆದುಕೊಂಡಿದೆ. ದಸರಾ ಗಿಪ್ಟ್ ಆಗಿ ಈ ಚಿತ್ರ ಬಿಡುಗಡೆ ಮಾಡಲು ನಿರ್ಮಾಪಕರು ಗುರಿ ಹಾಕಿಕೊಂಡಿರುವುದು ವಿರಾಮಕ್ಕೆ ಕಾರಣ ಎನ್ನಲಾಗಿದೆ.
ಪವನ್ ಒಡೆಯರ್ ನಿರ್ದೇಶನದ ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ದಸರಾ ವೇಳೆಯಲ್ಲಿ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡದ್ದಾಗಿದೆ. ಪುನೀತ್ ರಾಜ್ ಕುಮಾರ್ ಮುಂದಿನ ಚಿತ್ರ ವೀಕ್ಷಣೆಗಾಗಿ ಕಾಯುತ್ತಿರುವ ಅವರ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿಯಾಗಿದೆ.
ಚಿತ್ರತಂಡ ಪ್ರಸ್ತುತ ಬಾದಾಮಿಯಲ್ಲಿ ದ್ದು ಕಳೆದ ನಾಲ್ಕು ದಿನಗಳಿಂದ ಚಿತ್ರೀಕರಣದಲ್ಲಿ ತೊಡಗಿದೆ. ಚಿತ್ರದ ಕೆಲ ದೃಶ್ಯಗಳು ಹಾಗೂ ಸಾಹಸವನ್ನು ಇಲ್ಲಿ ಚಿತ್ರೀಕರಣಗೊಳಿಸಿಕೊಂಡು ಬೆಂಗಳೂರಿಗೆ ವಾಪಾಸ್ ಆಗಲಿದೆ. ತದನಂತರ ಶೂಟಿಂಗ್ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಆಗಸ್ಟ್ 10ರ ವರೆಗೂ ಶೂಟಿಂಗ್ ನಡೆಯಲಿದೆ. ನಂತರ ಚಿತ್ರದ ಬಹುಮುಖ್ಯ ಭಾಗದ ಚಿತ್ರೀಕರಣಕ್ಕಾಗಿ ಚಿತ್ರತಂಡ ಕೊಲ್ಕತ್ತಾಕ್ಕೆ ಪ್ರಯಾಣ ಬೆಳೆಸಲಿದೆ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಮೊದಲ ಕಾಫಿ ಹೊರಬರಲಿದ್ದು, ಅಕ್ಟೋಬರ್ 5 ರಂದು ಚಿತ್ರ ಬಿಡುಗಡೆ ಮಾಡುವ ಉದ್ದೇಶ ಪವನ್ ಒಡೆಯರ್ ಅವರದ್ದಾಗಿದೆ ಎಂದು ಅನುಪಮ ಪರಮೇಶ್ವರ್ ತಿಳಿಸಿದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


