ಸಿನಿಮಾ ಸುದ್ದಿ

ರವಿಚಂದ್ರನ್-ಉಪೇಂದ್ರ ಕಾಂಬಿನೇಷನ್ ಚಿತ್ರಕ್ಕೆ ಓಂ ಪ್ರಕಾಶ್ ರಾವ್ ನಿರ್ದೇಶನ

ಓಂ ಪ್ರಕಾಶ್ ರಾವ್ ನಿರ್ದೇಶನದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಒಟ್ಟಿಗೆ...

ರವಿಚಂದ್ರನ್-ಉಪೇಂದ್ರ ಕಾಂಬಿನೇಷನ್ ಚಿತ್ರಕ್ಕೆ ಓಂ ಪ್ರಕಾಶ್ ರಾವ್ ನಿರ್ದೇಶನ
ಓಂ ಪ್ರಕಾಶ್ ರಾವ್, ರವಿಚಂದ್ರನ್, ಉಪೇಂದ್ರ
Published On :

ಓಂ ಪ್ರಕಾಶ್ ರಾವ್ ನಿರ್ದೇಶನದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಒಟ್ಟಿಗೆ ಅಭಿನಯಿಸಲಿದ್ದಾರೆ. ಚಿತ್ರಕ್ಕೆ ಬಂಡವಾಳ ಹೂಡುವವರು ಕನಕಪುರ ಶ್ರೀನಿವಾಸ್.ಹೀಗಂತ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಚಿತ್ರಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನುತ್ತಿವೆ ಮೂಲಗಳು. ಆಗಸ್ಟ್ 24ರಂದು ಚಿತ್ರದ ಮುಹೂರ್ತ ನಡೆಯಲಿದ್ದು ನಂತರ 75 ದಿನಗಳ ಶೂಟಿಂಗ್ ನಡೆಯಲಿದೆ ಎನ್ನುತ್ತವೆ ಮೂಲಗಳು.

ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಉಪೇಂದ್ರ ಆರ್ ಚಂದ್ರು ಅವರ ಐ ಲವ್ ಯೂ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಇನ್ನೊಂದೆಡೆ ನಿರ್ಮಾಪಕ ಶ್ರೀನಿವಾಸ್ ಅವರ ಅದಿರಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಅದಿರ ಸಂತು ಎಂಬ ಹೊಸ ನಿರ್ದೇಶಕ ನಿರ್ದೇಶಿಸುತ್ತಿದ್ದಾರೆ. ಉಪೇಂದ್ರ ಅವರ ಓಂ ಪ್ರಕಾಶ್ ರಾವ್ ಅವರ ಜೊತೆಗಿನ ಚಿತ್ರ ಮುಗಿದ ಮೇಲೆ ಈ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಇನ್ನೊಂದೆಡೆ ರವಿಚಂದ್ರನ್ ರಾಜೇಂದ್ರ ಪೊನ್ನಪ್ಪ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

ಸಾಹುಕಾರ ಚಿತ್ರದಲ್ಲಿ ಓಂ ಪ್ರಕಾಶ್ ರಾವ್ ಮತ್ತು ರವಿಚಂದ್ರನ್ ಒಟ್ಟಿಗೆ ಕೆಲಸ ಮಾಡಿದ್ದರೆ, ಉಪೇಂದ್ರ ಮತ್ತು ಓಂ ಪ್ರಕಾಶ್ ರಾವ್ ಕಾಂಬಿನೇಷನ್ ಪ್ರಥಮ ಬಾರಿ.ಹೊಯ್ಸಳ ಎಂದು ಚಿತ್ರಕ್ಕೆ ಹೆಸರಿಡುವ ಸಾಧ್ಯತೆಯಿದ್ದು ಕಾಪಿರೈಟ್ ರಾಮು ಎಂಟರ್ ಪ್ರೈಸಸ್ ಬಳಿ ಇದೆ.
ಚಿತ್ರದಲ್ಲಿ ಮೂವರು ನಾಯಕಿಯರಿರಲಿದ್ದಾರೆ. ನಿಮಿಕಾ ರತ್ನಾಕರ್ ಮೊದಲ ನಾಯಕಿಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.