ಎ ಕ್ಲಾಸ್ ಟ್ರೀಟ್ಮೆಂಟ್ ವಿರೋಧಿಸಿ ನಿರ್ದೇಶಕ, ನಿರ್ಮಾಪಕರ ಪ್ರತಿಭಟನೆ!
ಚಿತ್ರಗಳಿಗೆ ಪ್ರಮಾಣೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ 100 ಕ್ಕೂ ಹೆಚ್ಚು ನಿರ್ದೇಶಕರು, ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.

Published On :
ಬೆಂಗಳೂರು: ಚಿತ್ರಗಳಿಗೆ ಪ್ರಮಾಣೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ 100 ಕ್ಕೂ ಹೆಚ್ಚು ನಿರ್ದೇಶಕರು, ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಸೆನ್ಸಾರ್ ಬೋರ್ಡ್ ನಿಂದ ಚಿತ್ರಗಳ ಪ್ರಮಾಣೀಕರ ಪ್ರಕ್ರಿಯೆ ವಿಳಂಬವಾಗುತ್ತಿದೆ, ಅಷ್ಟೇ ಅಲ್ಲದೇ ಚಿತ್ರಗಳಿಗೆ ಎ ಪ್ರಮಾಣಪತ್ರ ನೀಡುತ್ತಿರುವುದರಿಂದ ಸರ್ಕಾರದಿಂದ ಸಬ್ಸಿಡಿ ಸಿಗುತ್ತಿಲ್ಲ, ಸ್ಯಾಟಲೈಟ್ ಹಕ್ಕುಗಳನ್ನೂ ಪಡೆಯುವುದು ದುಸ್ತರವಾಗಿದೆ ಎಂದು ನಿರ್ದೇಶಕ, ನಿರ್ಮಾಪಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ತಿಕ್ ಚಂದ್ರ ಈ ಬಗ್ಗೆ ಮಾತನಾಡಿದ್ದು, ಕೆಎಫ್ ಸಿಸಿ ಅಧ್ಯಕ್ಷರಿಗೆ ನಮ್ಮ ಸಮಸ್ಯೆಗಳ ಕುರಿತಂತೆ ವಿವರಿಸಿ ಪತ್ರವನ್ನು ನೀಡಿದ್ದೇವೆ. ಸೆನ್ಸಾರ್ ಬೋರ್ಡ್ ನಲ್ಲಿ ನಿರ್ದಿಷ್ಟ ತುಣುಕುಗಳಿಗೆ ಕತ್ತರಿ ಹಾಕುವಂತೆ ಆದೇಶ ನೀಡಲಾಗುತ್ತದೆ. ನಿಯಮಗಳ ಪ್ರಕಾರ ಈ ಬಗ್ಗೆ ನಿರ್ದೇಶಕರು, ನಿರ್ಮಾಪಕರೊಂದಿಗೆ ಚರ್ಚೆ ನಡೆಸಬಹುದು ಆದರೆ ಅದು ಆಗುತ್ತಿಲ್ಲ, ಸೆನ್ಸಾರ್ ಬೋರ್ಡ್ ನ ತೀರ್ಮಾನದಂತೆಯೇ ನಡೆದುಕೊಳ್ಳಲು ಅಪೇಕ್ಷಿಸುತ್ತಾರೆ ಎಂದು ಆರೋಪಿಸಿದ್ದಾರೆ.
ಚರ್ಚೆಗೆ ಕೂತೊಡನೆಯೇ ಎ ಸರ್ಟಿಫಿಕೇಟ್ ನೀಡುತ್ತೇವೆ ಎಂದು ಬೆದರಿಕೆ ಹಾಕುತ್ತಾರೆ, ಇನ್ನೂ ಹೆಚ್ಚು ಮಾತನಾಡಿದರೆ ಉನ್ನತ ಮಟ್ಟದ ಅಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಸುತ್ತಾರೆ. ನಮಗೆ ಬೇರೆ ಆಯ್ಕೆಗಳಿಲ್ಲದೇ ಪ್ರತಿಭಟನೆ ನಡೆಸುತ್ತಿದ್ದೇವೆ. ಹೇಳಿದ್ದಾರೆ. ಪ್ರಾರಂಭದಲ್ಲಿ ನನಗೆ ಮಾತ್ರ ಈ ಸಮಸ್ಯೆ ಕಾಡುತ್ತಿದೆ ಎಂದುಕೊಂಡಿದ್ದೆ, ಆದರೆ ನನ್ನಂತೆಯೇ ಹಲವು ನಿರ್ಮಾಪಕರೂ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುತ್ತಾರೆ ಕಾರ್ತಿಕ್ ಚಂದ್ರ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನಿರ್ದೇಶಕKarnataka Film Chamber of Commerceಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿA certificateನಿರ್ಮಾಪಕರ ಪ್ರತಿಭಟನೆಎ ಪ್ರಮಾಣ ಪತ್ರDirector\'s Protest
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


