ಇಂದು ರಿಷಬ್ ಶೆಟ್ಟಿಯ 'ಸರ್ಕಾರಿ ಹಿ.ಪ್ರಾ. ಶಾಲೆ’ ಆಡಿಯೋ ರಿಲೀಸ್: ಕಿಚ್ಚ ಸುದೀಪ್ ಆಕರ್ಷಣೆ
ನಿರ್ದೇಶಕ ರಿಷಬ್ ಶೆಟ್ಟಿ ತನ್ನ ಮುಂದಿನ ಚಿತ್ರ ’ಸರ್ಕಾರಿ ಹಿ.ಪ್ರಾ.. ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರದ ಆಡಿಯೋ ಲಾಂಚ್ ಗೆ ಸಕಲ ಸಿದ್ದತೆ ನಡೆಸಿದ್ದಾರೆ

Published On :
ಬೆಂಗಳೂರು: ನಿರ್ದೇಶಕ ರಿಷಬ್ ಶೆಟ್ಟಿ ತನ್ನ ಮುಂದಿನ ಚಿತ್ರ ’ಸರ್ಕಾರಿ ಹಿ.ಪ್ರಾ.. ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರದ ಆಡಿಯೋ ಲಾಂಚ್ ಗೆ ಸಕಲ ಸಿದ್ದತೆ ನಡೆಸಿದ್ದಾರೆ. ಶನಿವಾರ ಈ ಚಿತ್ರದ ಆಡಿಯೋ ಬಿಡುಗಡೆಯಾಗಿತ್ತಿದ್ದು ಹಿರಿಯ ನಟ ಅನಂತ್ ನಾಗ್ ಸೇರಿ ಅನೇಕ ಮಕ್ಕಳು ಇದರಲ್ಲಿ ನಟಿಸಿದ್ದಾರೆ. ಇನ್ನೂ ವಿಶೇಷವೆಂದರೆ ಕಿಚ್ಚ ಸುದೀಪ್ ಈ ಆಡಿಯೋ ಬಿಡುಗಡೆಗೊಳಿಸುತ್ತಿದ್ದಾರೆ.
ವಾಸುಕಿ ವೈಭವ್ ಸಂಯೋಜಿಸಿರುವ ಒಟ್ಟು ಒಂಭತ್ತು ಹಾಡುಗಳು ಚಿತ್ರದಲ್ಲಿದೆ. ಅಜನೀಶ್ ಲೋಕನಾಥ್ ಚಿತ್ರಕ್ಕೆ ಹಿನ್ನೆಲೆ ಸಂಗೀತ ಒದಗಿಸಿದ್ದು ಚಿತ್ರತಂಡ ಇದಾಗಲೇ ಮೂರು ಹಾಡುಗಳನ್ನು ಬಿಡುಗಡೆಗೊಳಿಸಿದ್ದು ಪ್ರತಿಯೊಂದು ಸಹ ಮಿಲಿಯನ್ ಸಂಖ್ಯೆಯ ಹಿಟ್ ಗಳೊಂದಿಗೆ ವೈರಲ್ ಆಗಿದೆ. ಇಂದಿನ ಕಾರ್ಯಕ್ರಮದಲ್ಲಿ ಚಿತ್ರದ ಮಿಕ್ಕ ಹಾಡುಗಳನ್ನು ಬಿಡುಗಡೆಗೊಳಿಸಲು ರಿಷಬ್ ಯೋಜನೆ ರೂಪಿಸಿದ್ದಾರೆ.
ರಂಜನ್, ಸಂಪತ್, ಪ್ರಮೋದ್ ಶೆಟ್ಟಿ, ಸಪ್ತ, ಮಹೇಂದ್ರ, ಸೋಹನ್ ಶೆಟ್ಟಿ ಇನ್ನೂ ಮೊದಲಾದವರು ನಟಿಸಿರುವ ಈ ಚಿತ್ರದ ಸೆನ್ಸಾರ್ ಮುಗಿದ ಬಳಿಕ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಲು ಚಿತ್ರತಂಡ ನಿರ್ಧರಿಸಿದೆ. ಆದರೆ ಬಲ್ಲ ಮೂಲಗಳ ಪ್ರಕಾರ ಈ ವರ್ಷದ ಸ್ವಾತಂತ್ರ ದಿನಾಚರಣೆ ವೇಳೆಗೆ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Anant NagSudeepಸುದೀಪ್Rishab Shettyರಿಷಬ್ ಶೆಟ್ಟಿಅನಂತ್ ನಾಗ್Sarkari Hi Pra Shaale Kasaragodu: Koduge Ramanna Raiಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು: ಕೊಡುಗೆ ರಾಮಣ್ಣ ರೈ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


