ಕರ್ನಾಟಕದಲ್ಲಿ 'ಕಾಳ' ಚಿತ್ರ ಬಿಡುಗಡೆಗೆ ಯಾವುದೇ ಅಡ್ಡಿಯಾಗಲಿಕ್ಕಿಲ್ಲ ಎಂದು ಭಾವಿಸುತ್ತೇನೆ: ರಜನಿಕಾಂತ್
ಕರ್ನಾಟಕದಲ್ಲಿ ಕಾಳ ಚಿತ್ರಕ್ಕೆ ಯಾವುದೇ ಅಡ್ಡಿಯುಂಟಾಗಬಹುದು ಎಂದು ನನಗೆ ಅನಿಸುವುದಿಲ್ಲ...

ಚೆನ್ನೈ: ಕರ್ನಾಟಕದಲ್ಲಿ ಕಾಳ ಚಿತ್ರಕ್ಕೆ ಯಾವುದೇ ಅಡ್ಡಿಯುಂಟಾಗಬಹುದು ಎಂದು ನನಗೆ ಅನಿಸುವುದಿಲ್ಲ ಎಂದು ಚಿತ್ರದ ನಾಯಕ ನಟ ರಜನಿಕಾಂತ್ ಹೇಳಿದ್ದಾರೆ.
ಕರ್ನಾಟಕದಲ್ಲಿ ತಮಿಳು ಮಾತನಾಡುವ ಮಾತ್ರವಲ್ಲದೆ ಬೇರೆ ಭಾಷೆಗಳ ಜನರು ಕೂಡ ಸಿನಿಮಾ ನೋಡಲು ಇಚ್ಛಿಸುತ್ತಾರೆ. ಹೀಗಿರುವಾಗ ಕರ್ನಾಟಕ ಸರ್ಕಾರ ಚಿತ್ರ ಪ್ರದರ್ಶನ ಮಾಡುವ ಥಿಯೇಟರ್ ಗಳು ಮತ್ತು ಸಿನಿಮಾ ನೋಡುವ ವೀಕ್ಷಕರಿಗೆ ಸೂಕ್ತ ರಕ್ಷಣೆಯನ್ನು ನೀಡುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.
ರಜನಿಕಾಂತ್ ಅಭಿನಯದ ಕಾಳ ಚಿತ್ರ ನಾಳೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
ರಜನಿಕಾಂತ್ ಅವರು ಇತ್ತೀಚೆಗೆ ಕಾವೇರಿ ನೀರು ಹಂಚಿಕೆ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕದಲ್ಲಿ ಅವರ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಸಿದ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾಳ ಬಿಡುಗಡೆಗೆ ನಿರ್ಬಂಧ ಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


