ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ನಟ ದುನಿಯಾ ವಿಜಯ್ ಬಂಧನ
ಕನ್ನಡದ ಯುವ ನಟರಾಗಿದ್ದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ...

Published On :
ಬೆಂಗಳೂರು: ಕನ್ನಡದ ಯುವ ನಟರಾಗಿದ್ದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಪರಾರಿಯಾಗಲು ಸಹಾಯ ಮಾಡಿದ್ದ ಆರೋಪದ ಮೇಲೆ ನಟ ದುನಿಯಾ ವಿಜಯ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಸುಂದರ್ ಗೌಡ ಪರಾರಿಯಾಗಲು ಸಹಾಯ ಮಾಡಿದ್ದ ಆರೋಪ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳ ಮೇಲೆ ದುನಿಯಾ ವಿಜಯ್ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಎಫ್ಐಆರ್ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಲ್ಲಿದ್ದ ವಿಜಯ್ ತಲೆಮರೆಸಿಕೊಂಡಿದ್ದು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇದೀಗ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.
ಮಾಸ್ತಿಗುಡಿ ಸಿನಿಮಾದ ಚಿತ್ರೀಕರಣದ ವೇಳೆ ಇಬ್ಬರು ಖಳನಟರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಗೌಡ ವಿರುದ್ಧ ರಾಮನಗರದ ಜೆಎಂಎಫ್ಸಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ವೇಳೆ ಸುಂದರ್ ನನ್ನು ಬಂಧಿಸಲು ತಾವರೆಕೆರೆ ಪೊಲೀಸರು ಬಂದಾಗ ದುನಿಯಾ ವಿಜಯ್ ಮಧ್ಯ ಪ್ರವೇಶಿಸಿದ್ದು ಈ ವೇಳೆ ಸುಂದರ್ ಅಲ್ಲಿಂದ ತಪ್ಪಿಸಿಕೊಂಡಿದ್ದರು. ಈ ಸಂಬಂಧ ದುನಿಯಾ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದುನಿಯಾ ವಿಜಯ್duniya vijayಬೆಂಗಳೂರು ಪೊಲೀಸ್Bengaluru policeಮಾಸ್ತಿಗುಡಿUdayAnilಅನಿಲ್ಉದಯ್ಸುಂದರ್ ಗೌಡMasthigudiSunder Gowda
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


