'ರಾಕಿಂಗ್ ಸ್ಟಾರ್' ಯಶ್ ಗಾಗಿ ನಿರ್ದೇಶಕ ಅನಿಲ್ ಕುಮಾರ್ ಕಥೆ
ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಕೆ. ಜಿ. ಎಫ್ ಚಿತ್ರ ಶೂಟಿಂಗ್ ವೇಳೆಯಲ್ಲಿಯೇ ಸಾಕಷ್ಟು ಸುದ್ದಿ ಮಾಡಿದ್ದು, ಈ ವರ್ಷದ ಬಹು ನಿರೀಕ್ಷಿತ ಚಿತ್ರ ಬಿಡುಗಡೆಗೆ ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ.

Published On :
ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಕೆ. ಜಿ. ಎಫ್ ಚಿತ್ರ ಶೂಟಿಂಗ್ ವೇಳೆಯಲ್ಲಿಯೇ ಸಾಕಷ್ಟು ಸುದ್ದಿ ಮಾಡಿದ್ದು, ಈ ವರ್ಷದ ಬಹು ನಿರೀಕ್ಷಿತ ಚಿತ್ರ ಬಿಡುಗಡೆಗೆ ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ.
ಈ ಮಧ್ಯೆ ಯಶ್ ಅವರ ಮುಂದಿನ ಚಿತ್ರದ ಬಗ್ಗೆ ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಮನೆಮಾಡಿದೆ. ಹರ್ಷ ನಿರ್ದೇಶನದ ರಾಣಾ ಹಾಗೂ ಮುಪ್ತಿ ಖ್ಯಾತಿಯ ಅನಿಲ್ ಕುಮಾರ್ ನಿರ್ದೇಶನದ ಚಿತ್ರಕ್ಕೆ ಯಶ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬಂತಹ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.
ಅನಿಲ್ ಕುಮಾರ್ ಹಲವು ವರ್ಷಗಳಿಂದ ಯಶ್ ತಂಡದಲ್ಲಿ ಸಕ್ರೀಯರಾಗಿದ್ದು, ಸಂತು ಸ್ಟ್ರೈಟ್ ಪಾರ್ವಡ್ ಚಿತ್ರದಲ್ಲೂ ಸಂಭಾಷಣೆ ಬರೆದಿದ್ದಾರೆ. ಯಶ್ ಅವರೊಂದಿಗೆ ಚಿತ್ರ ಮಾಡಬೇಕೆಂದು ಹಲವು ವರ್ಷಗಳಿಂದ ಯೋಜನೆ ಹಾಕಿಕೊಂಡಿದ್ದರು ಎಂಬುದು ಯಶ್ ಆಪ್ತ ವಲಯದಿಂದ ತಿಳಿದುಬಂದಿದೆ.
ಕೆಜಿಎಫ್ ಚಿತ್ರಕ್ಕಾಗಿ ಯಶ್ ಸಾಕಷ್ಟು ಸಮಯ ನೀಡಿದ್ದರಿಂದ ಅನಿಲ್ ಕುಮಾರ್ ರ‍್ಯಾಂಬೋ-2 ನಿರ್ದೇಶನ ಮಾಡಲು ನಿರ್ಧರಿಸಿದ್ದರು. ಕಳೆದ ತಿಂಗಳು ಬಿಡುಗಡೆಯಾದ ಈ ಚಿತ್ರ ಹಿಟ್ ಆಗಿದೆ. ಹರ್ಷ ಪ್ರಸ್ತುತ ನಿಖಿಲ್ ಕುಮಾರ್ ಅವರ ಸೀತಾ ರಾಮ ಕಲ್ಯಾಣ ಚಿತ್ರ ಒಪ್ಪಿಕೊಂಡಿದ್ದು, ಏಕಕಾಲದಲ್ಲಿ ರಾಣ ಕಥೆ ಸಿದ್ಧಪಡಿಸುತ್ತಿದ್ದಾರೆ.
ಅಲ್ಲದೇ ನಿರ್ದೇಶಕ ನರ್ತನ್ ಕೂಡಾ ಯಶ್ ಗಾಗಿ ಕಥೆ ಸಿದ್ದಪಡಿಸುತ್ತಿದ್ದಾರೆ. ಕೆಜಿಎಫ್ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದ್ದು, ಯಶ್ ಗೆ ಸಮಯ ಸಿಗದಂತಾಗಿದೆ. ಬ್ಯಾಕ್ ಟು ಬ್ಯಾಕ್ ಯೋಜನೆಗಳು ಯಶ್ ಗಾಗಿ ಹುಡುಕಿಕೊಂಡು ಬರುತ್ತಿದ್ದು, ಕಥೆ ಕೇಳುತ್ತಿದ್ದಾರೆ. ಆದರೆ. ಯಾವ ಚಿತ್ರವನ್ನು ಮೊದಲು ಯಶ್ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


