ಕಾಮಿಡಿ ಕಿಲಾಡಿಗಳು-2 ವಿಜೇತ ಮಡೆನೂರು ಮನು!
ಹಾಸನದ ಮಡೆನೂರು ಮನು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹೊರಹೊಮ್ಮಿದ್ದಾರೆ...

Published On :
ಬೆಂಗಳೂರು: ಹಾಸನದ ಮಡೆನೂರು ಮನು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಇನ್ನು ರಾಮದುರ್ಗದ ಅಪ್ಪಣ್ಣ ಮತ್ತು ಮಂಗಳೂರಿನ ಸೂರಜ್ ಜಂಟಿಯಾಗಿ ದ್ವಿತೀಯ ಸ್ಥಾನ ಪಡೆದಿದ್ದರೆ ಕುಂದಾಪುದ ಸೂರ್ಯ ಮೂರನೇ ಸ್ಥಾನ ಪಡೆದಿದ್ದಾರೆ.
ವಿಜೇತ ಮಡೆನೂರು ಮನು ಅವರಿಗೆ 5 ಲಕ್ಷ ಚೆಕ್ ಮತ್ತು ಟ್ರೋಫಿ ನೀಡಲಾಯಿತು. ದ್ವಿತೀಯ ಸ್ಥಾನ ಪಡೆದಿದ್ದ ಅಪ್ಪಣ್ಣ ಮತ್ತು ಸೂರಜ್ ಗೆ ತಲಾ ಎರಡು ಲಕ್ಷ ಬಹುಮಾನ ಮತ್ತು ಟ್ರೋಫಿ, ಮೂರನೇ ಸ್ಥಾನ ಪಡೆದ ಸೂರ್ಯಗೆ 1 ಲಕ್ಷ ಬಹುಮಾನ ಮತ್ತು ಟ್ರೋಫಿ ನೀಡಲಾಯಿತು.
ಕಾಮಿಡಿ ಕಿಲಾಡಿಗಳು ಸೀಸನ್ 2 ಫೈನಲ್ ಸ್ಪರ್ಧೆ ವಿಜಯಪುರದಲ್ಲಿ ನಡೆದಿದ್ದು ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಆಗಮಿಸಿದ್ದರು. ತೀರ್ಪುಗಾರರ ಅಂಕಗಳು ಮತ್ತು ವೀಕ್ಷಕರ ಎಸ್ಎಂಎಸ್ ಆಧರಿಸಿ ವಿಜೇತರನ್ನು ಆಯ್ಕೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HasanಹಾಸನwinnerZee Kannadaಜೀ ಕನ್ನಡವಿಜೇತComedy Khiladigalu 2Manu Madenoorಕಾಮಿಡಿ ಕಿಲಾಡಿಗಳು 2ಮಡೆನೂರು ಮನು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


