'ಅಂಬಿ ನಿಂಗೆ ವಯಸ್ಸಾಯ್ತೊ' ಚಿತ್ರದಲ್ಲಿ ಯಂಗ್ ಅಂಬರೀಷ್-ಸುಹಾಸಿನಿಯಾಗಿ ಸುದೀಪ್-ಶೃತಿ ಹರಿಹರನ್
ಅಂಬಿ ನಿಂಗೆ ವಯಸ್ಸಾಯ್ತೊ ಚಿತ್ರದಲ್ಲಿ ಸುದೀಪ್ ಮತ್ತು ಶೃತಿ ಹರಿಹರನ್ ನಟನೆಯ ಫೋಟೋಗಳು ಇತ್ತೀಚೆಗೆ ...

ಅಂಬಿ ನಿಂಗೆ ವಯಸ್ಸಾಯ್ತೊ ಚಿತ್ರದಲ್ಲಿ ಸುದೀಪ್ ಮತ್ತು ಶೃತಿ ಹರಿಹರನ್ ನಟನೆಯ ಫೋಟೋಗಳು ಇತ್ತೀಚೆಗೆ ಬಿಡುಗಡೆಯಾಗಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.
ಅಂಬರೀಷ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರದಲ್ಲಿ ಯುವಕನಾಗಿರುವ ಅಂಬರೀಷ್ ಪಾತ್ರವನ್ನು ಸುದೀಪ್ ಮಾಡುತ್ತಿದ್ದಾರೆ ಮತ್ತು ಸುಹಾಸಿನಿ ಯುವತಿಯಾಗಿರುವ ಪಾತ್ರವನ್ನು ಶೃತಿ ಹರಿಹರನ್ ನಿಭಾಯಿಸುತ್ತಿದ್ದಾರೆ.
ಗುರುದತ್ತ ಗಾಣಿಗ ನಿರ್ದೇಶನದ ಅಂಬಿ ನಿಂಗೆ ವಯಸ್ಸಾಯ್ತೊ ಚಿತ್ರದ ಕೊನೆಯ ಭಾಗದ ಕೆಲಸ ನಡೆಯುತ್ತಿದ್ದು ರೆಬೆಲ್ ಸ್ಟಾರ್, ಸುದೀಪ್ ಮತ್ತು ಇತರ ನಟರ ಡಬ್ಬಿಂಗ್ ಕೆಲಸ ಮುಗಿದಿದೆ. ಕೇವಲ ಒಂದು ಹಾಡಿನ ಚಿತ್ರೀಕರಣ ಬಾಕಿಯಿದ್ದು ಮುಂದಿನ ತಿಂಗಳು ಆಡಿಯೊ ಬಿಡುಗಡೆಯಾಗಲಿದೆ.
ಕಿಚ್ಚಾ ಕ್ರಿಯೇಷನ್ ನಡಿ ಚಿತ್ರ ತೆರೆಗೆ ಬರುತ್ತಿದ್ದು, ಜಾಕ್ ಮಂಜು ಕೂಡ ಬಂಡವಾಳ ಹಾಕಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


