ಸಿನಿಮಾ ಸುದ್ದಿ

ಪಡ್ಡೆ ಹುಲಿಯಲ್ಲಿ ಶ್ರೇಯಸ್ ಗೆ ನಿಶ್ವಿತಾ ನಾಯ್ಡು ನಾಯಕಿ

ಕೆ. ಮಂಜು ಮಗ ಶ್ರೇಯಸ್‌ ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೆ ನಿಶ್ವಿಕಾ ನಾಯ್ಡು ನಾಯಕಿಯಾಗಿ ಆಯ್ಕೆಯಾಗಿದ್ದಾರೆ....

ಪಡ್ಡೆ ಹುಲಿಯಲ್ಲಿ ಶ್ರೇಯಸ್ ಗೆ ನಿಶ್ವಿತಾ ನಾಯ್ಡು ನಾಯಕಿ
ನಿಶ್ವಿಕಾ ನಾಯ್ಡು
Published On :
ಬೆಂಗಳೂರು:  ಕೆ. ಮಂಜು ಮಗ ಶ್ರೇಯಸ್‌ ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೆ ನಿಶ್ವಿಕಾ ನಾಯ್ಡು  ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 
"ಪಡ್ಡೆ ಹುಲಿ' ಇದೇ ತಿಂಗಳ 11ಕ್ಕೆ ಪ್ರಾರಂಭವಾಗುವುದಕ್ಕೆ ಸಜ್ಜಾಗಿದೆ. ಈಗಾಗಲೇ ಶ್ರೇಯಸ್‌ನ ಮೊದಲ ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಇತ್ತೀಚೆಗೆ ನಟ-ನಿರ್ದೇಶಕ ಸುದೀಪ್‌ ಅವರು ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಈ ಮಧ್ಯೆ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದು, ಶ್ರೇಯಸ್‌ ಎದುರು ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ನಟಿಸುತ್ತಿದ್ದಾರೆ. ಅನೀಶ್‌ ತೇಜೇಶ್ವರ್‌ ಅಭಿನಯದ ಮತ್ತು ನಿರ್ದೇಶನದ "ವಾಸು ಪಕ್ಕಾ ಕಮರ್ಷಿಯಲ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.
ಅದಾದ ನಂತರ ಚಿರಂಜೀವಿ ಸರ್ಜಾ ಅಭಿನಯದ "ಅಮ್ಮಾ ಐ ಲವ್‌ ಯೂ' ಚಿತ್ರದಲ್ಲೂ ನಾಯಕಿಯಾಗಿ ನಟಿಸಿದ್ದರು. ಆ ಎರಡು ಚಿತ್ರಗಳು ಬಿಡುಗಡೆಯಾಗುವ ಮುನ್ನವೇ, ಅವರು "ಪಡ್ಡೆ ಹುಲಿ'ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
"ಪಡ್ಡೆ ಹುಲಿ' ಚಿತ್ರವನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಅವರ ಸಂಗೀತ ಮತ್ತು ಕೆ.ಎಸ್‌. ಚಂದ್ರಶೇಖರ್‌ ಅವರ ಛಾಯಾಗ್ರಹಣ ಇರಲಿದೆ. ಈ ಹಿಂದೆ "ಉಪ್ಪು ಹುಳಿ ಖಾರ' ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ ರೆಡ್ಡಿ, ಈ ಚಿತ್ರವನ್ನು ತಮ್ಮ ತೇಜಸ್ವಿನಿ ಎಂಟರ್‌ಪ್ರೈಸಸ್‌ ಬ್ಯಾನರ್‌ನ ಮೂಲಕ ನಿರ್ಮಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.