ಮಾರ್ಚ್ 8ರಿಂದ ಅಮೆರಿಕದಲ್ಲಿ 'ಟಗರು' ಆಟ ಶುರು!
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರ ರಾಜ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು ಥಿಯೇಟರ್ ಗಳ ಮುಂದೆ...

Published On :
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರ ರಾಜ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು ಥಿಯೇಟರ್ ಗಳ ಮುಂದೆ ಹೌಸ್ ಪುಲ್ ಬೋರ್ಡ್ ಗಳು ರಾರಾಜಿಸುತ್ತಿವೆ.
ಈ ಮಧ್ಯೆ ಟಗರು ಚಿತ್ರ ಅಮೆರಿಕದಲ್ಲಿ ಮಾರ್ಚ್ 8ರಿಂದ ಬಿಡುಗಡೆಯಾಗಲಿದೆ. ಕಳೆದ ವಾರ ಬಿಡುಗಡೆಯಾದ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದು ಥಿಯೇಟರ್ ಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಟಗರು ಚಿತ್ರದ ಓಟ ಮುಂದಿನ ಕೆಲ ವಾರಗಳಲ್ಲಿ ಹೀಗೆ ಇದ್ದರೆ ಚಿತ್ರ 50 ಕೋಟಿ ರುಪಾಯಿ ಗಳಿಕೆ ಮಾಡಲಿದೆ ಎಂದು ಚಿತ್ರದ ನಿರ್ಮಾಪಕ ಶ್ರೀಕಾಂತ್ ಹೇಳಿದ್ದಾರೆ. ಇನ್ನು ಅಮೆರಿಕದ 25 ನಗರಗಳಲ್ಲಿ ಮಾರ್ಚ್ 8ರಿಂದ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.
ಶಿವರಾಜ್ ಕುಮಾರ್ ಸೇರಿದಂತೆ ಚಿತ್ರದಲ್ಲಿ ಧನಂಜಯ್, ವಶಿಷ್ಠ ಸಿಂಹಾ, ಭಾವನ, ಮಾನ್ವಿತಾ ಹರೀಶ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು ಟಗರು ಹಾಡುಗಳು ಸಖತ್ ಹಿಟ್ ಆಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


