ಸಿನಿಮಾ ಸುದ್ದಿ

ಬ್ಯಾಂಕ್ ವಂಚನೆ ಆರೋಪ: ನಟಿ ಸಿಂಧು ಮೆನನ್ ವಿರುದ್ಧ ಎಫ್ಐಆರ್, ಸಹೋದರನ ಬಂಧನ

ಸಾಲ ಪಡೆದುಕೊಂಡು ಬ್ಯಾಂಕ್'ಗೆ ವಂಚನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ಚಿತ್ರ ನಟಿ ಸಿಂಧು ಮೆನನ್ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ...

ಬ್ಯಾಂಕ್ ವಂಚನೆ ಆರೋಪ: ನಟಿ ಸಿಂಧು ಮೆನನ್ ವಿರುದ್ಧ ಎಫ್ಐಆರ್, ಸಹೋದರನ ಬಂಧನ
ಚಿತ್ರ ನಟಿ ಸಿಂಧು ಮೆನನ್ (ಸಂಗ್ರಹ ಚಿತ್ರ)
Published On :
ಬೆಂಗಳೂರು: ಸಾಲ ಪಡೆದುಕೊಂಡು ಬ್ಯಾಂಕ್'ಗೆ ವಂಚನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ಚಿತ್ರ ನಟಿ ಸಿಂಧು ಮೆನನ್ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. 
ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ವೊಂದಕ್ಕೆ ರೂ.36 ಲಕ್ಷ ವಂಚನೆ ಮಾಡಿರುವ ಆರೋಪ ಮೇರೆಗೆ ನಟಿ ಸಿಂಧು ಮೆನನ್ ವಿರುದ್ಧ ನಗರದ ಆರ್'ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. 
ಎಫ್ಐಆರ್ ದಾಖಲಾದ ಬಳಿಕ ನಟಿ ಸಿಂಧು ಮೆನನ್ ಅವರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಪ್ರಕರಣ ಸಂಬಂಧ ಇದೀಗ ಪೊಲೀಸರು ನಟಿಯವರ ಸಹೋದರ ಮನೋಜ್ ಕೆ ವರ್ಮಾ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಹೇಳಲಾಗುತ್ತಿದೆ. 
ಕಾರು ಖರೀದಿಗಾಗಿ ನಟಿ ಬ್ಯಾಂಕ್ ವೊಂದರಲ್ಲಿ ರೂ.35 ಲಕ್ಷ ಸಾಲ ಪಡೆದುಕೊಂಡಿದ್ದು, ಸಾಲ ಪಡೆಯಲು ಜ್ಯುಬಿಲೆಂಟ್ ಮೋಟಾರ್ಸ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ದಾಖಲೆ ಸೃಷ್ಟಿಸಿದ್ದರು ಎನ್ನಲಾಗಿದೆ. ಸಾಲ ನೀಡಿದ ಬ್ಯಾಂಕ್ ನಂತರ ದಾಖಳೆ ಪರಿಶೀಲಿಸಿದಾಗ ದಾಖಲೆಗಳು ನಕಲಿ ಎಂಬ ವಿಚಾರ ಬೆಳಕಿಗೆ ಬಂದಿದೆ. 
ಬಳಿಕ ಬ್ಯಾಂಕ್ ನಿರ್ದೇಶಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಹಿನ್ನಲೆಯಲ್ಲಿ ಪೊಲೀಸರು ಸಿಂಧು ಮೆನನ್ ಅವರ ಸಹೋದರನನ್ನು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.