ಸಿನಿಮಾ ಸುದ್ದಿ

ಟ್ರೆಂಡ್ ಸೆಟ್ ಮಾಡುತ್ತಾ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೊಸ ಹೇರ್ ಸ್ಟೈಲ್!

ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಮುಂದಿನ ಚಿತ್ರದಲ್ಲಿ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ...

ಟ್ರೆಂಡ್ ಸೆಟ್ ಮಾಡುತ್ತಾ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೊಸ ಹೇರ್ ಸ್ಟೈಲ್!
ಪುನೀತ್ ರಾಜಕುಮಾರ್
Published On :
ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಮುಂದಿನ ಚಿತ್ರದಲ್ಲಿ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 
ಅದಕ್ಕಾಗಿ ಸಖತ್ ಕರಸತ್ತು ನಡೆಸಿರುವ ಪುನೀತ್ ರಾಜಕುಮಾರ್ ಅವರು ತಮ್ಮ ಹೇರ್ ಸ್ಟೈಲ್ ಅನ್ನು ಸ್ವಲ್ಪ ಬದಲಿಸಿಕೊಂಡಿದ್ದಾರೆ. ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ಪುನೀತ್ ನಟಿಸುತ್ತಿದ್ದು ಪುನೀತ್ ಲುಕ್ ಸಖತ್ ಸ್ಟೈಲಿಶ್ ಆಗಿದೆ. 
ಇನ್ನು ಈ ಚಿತ್ರಕ್ಕಾಗಿ ನಿರ್ದೇಶಕ ಪವನ್ ಒಡೆಯರ್ ಸಹ ಪುನೀತ್ ರಾಜಕುಮಾರ್ ರಂತೆ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ಇನ್ನು ಪುನೀತ್ ರಾಜಕುಮಾರ್ ಮತ್ತು ಪವನ್ ಒಡೆಯರ್ ಜೋಡಿ ರಣವಿಕ್ರಮ ಸೂಪರ್ ಹಿಟ್ ಚಿತ್ರವನ್ನು ನೀಡಿತ್ತು. ಈ ಕಾರಣದಿಂದ ಅಭಿಮಾನಿಗಳಲ್ಲಿ ಚಿತ್ರದ ಕುರಿತು ದೊಡ್ಡ ನಿರೀಕ್ಷೆ ಹುಟ್ಟಿದೆ. 
ಸ್ಯಾಂಡಲ್ವುಡ್ ನ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಮಾರ್ಚ್ 17ರ ಪುನೀತ್ ಅವರ ಹುಟ್ಟುಹಬ್ಬಕ್ಕೆ ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಲಿದೆ. 
ಪುನೀತ್ ಗೆ ಜೋಡಿಯಾಗಿ ಪ್ರಿಯಾಂಕಾ ಜ್ವಾಲಕರ್ ಆಯ್ಕೆಯಾಗಿದ್ದಾರೆ. ಸಾಫ್ಟ್ ವೇರ್ ಎಂಜಿನೀಯರ್ ಆಗಿರುವ ಪ್ರಿಯಾಂಕಾ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಕಲಿತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.