ಸಿನಿಮಾ ಸುದ್ದಿ

ಪಬ್ಲಿಸಿಟಿಗಾಗಿ ಹಲ್ಲೆ, ದರೋಡೆ ಕೇಸ್ ದಾಖಲಿಸಿದ್ದ ಸ್ಯಾಂಡಲ್ವುಡ್ ನವನಟ ವಿಕ್ರಂ ಕಾರ್ತಿಕ್

ಸ್ಯಾಂಡಲ್ವುಡ್ ನವನಟ ವಿಕ್ರಂ ಕಾರ್ತಿಕ್ ಮೇಲಿನ ಹಲ್ಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಪಬ್ಲಿಸಿಟಿಗಾಗಿ ನಟ ತಪ್ಪು ಕಳ್ಳತನ ಪ್ರಕರಣವನ್ನು ದಾಖಲಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ...

ಪಬ್ಲಿಸಿಟಿಗಾಗಿ ಹಲ್ಲೆ, ದರೋಡೆ ಕೇಸ್ ದಾಖಲಿಸಿದ್ದ ಸ್ಯಾಂಡಲ್ವುಡ್ ನವನಟ ವಿಕ್ರಂ ಕಾರ್ತಿಕ್
ವಿಕ್ರಂ ಕಾರ್ತಿಕ್
Published On :
ಬೆಂಗಳೂರು: ಸ್ಯಾಂಡಲ್ವುಡ್ ನವನಟ ವಿಕ್ರಂ ಕಾರ್ತಿಕ್ ಮೇಲಿನ ಹಲ್ಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಪಬ್ಲಿಸಿಟಿಗಾಗಿ ನಟ ದರೋಡೆ ಪ್ರಕರಣವನ್ನು ದಾಖಲಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 
ಬಸವೇಶ್ವರ ನಗರದ ವಾಟರ್ ಟ್ಯಾಂಕ್ ಬಳಿ ಮಂಗಳವಾರ ರಾತ್ರಿ ವಿಕ್ರಂ ಕಾರ್ತಿಕ್ ಬರುತ್ತಿರುವಾಗ ಆರು ಜನರ ತಂಡ ತನ್ನ ಮೇಲೆ ಹಲ್ಲೆ ಮಾಡಿ ತಮ್ಮ ಬಳಿಸಿದ್ದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಸತ್ಯಾಂಶ ಬೆಳಕಿಗೆ ಬಂದಿದ್ದು ನಟ ವಿಕ್ರಂ ಕುಡಿದ ಮತ್ತಿನಲ್ಲಿ ತಾನೇ ವೋಕ್ಸ್ ವ್ಯಾಗನ್ ಕಾರಿಗೆ ಗುದ್ದಿದ್ದಾರೆ. ನಂತರ ತನ್ನ ಬಳಿ ಇರುವ ಮೊಬೈಲ್, ಲ್ಯಾಪ್ ಟಾಪ್ ಮತ್ತು ಕಾರ್ ಕೀ ನೀಡಿ ನಾಳೆ ನಿಮ್ಮ ಕಾರನ್ನು ರಿಪೇರಿ ಮಾಡಿಸಿಕೊಡುತ್ತೇನೆ ಎಂದು ಹೇಳಿ ಅಲ್ಲಿಂದ ಹೊರಬಂದು ಪೊಲೀಸ್ ಠಾಣೆಯಲ್ಲಿ ತನ್ನ ಮೇಲೆ ಯಾರೋ ಹಲ್ಲೆ ನಡೆಸಿದ್ದದಾರೆ ಎಂಬ ನಾಟಕವಾಡಿದ್ದಾರೆ. 
ವಿಕ್ರಂ ಕಾರ್ತಿಕ್ ಆಪ್ತಮಿತ್ರರು ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ಮೊದಲು ಚಿತ್ರಕ್ಕೆ ಆಪ್ತಮಿತ್ರ 2 ಎಂದು ಹೆಸರಿಡಲಾಗಿತ್ತು. ನಂತರ ಅದನ್ನು ನಾಗವಲ್ಲಿ ವರ್ಸಸ್ ಆಪ್ತಮಿತ್ರರು ಎಂದು ಬದಲಿಸಲಾಗಿತ್ತು. 
ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಸಿನಿಮಾ ಬಿಡುಗಡೆ ಕೆಲಸದಲ್ಲಿ ತೊಡಗಿದ್ದ ಕಾರ್ತಿಕ್ ಪಬ್ಲಿಸಿಟಿ ಸ್ಟಂಟ್ ಗಾಗಿ ಈ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.