ರವಿಚಂದ್ರನ್ ಪುತ್ರ ಮನೋರಂಜನ್ ಚಿತ್ರದಲ್ಲಿ ರಾಘಣ್ಣ ವಿಲನ್?
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಬೃಹಸ್ಪತಿ ಚಿತ್ರದ ಬಳಿಕ ಚಿಲಂ ಚಿತ್ರದಲ್ಲಿ ನಟಿಸುತ್ತಿದ್ದು ಈ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ವಿಲನ್ ಪಾತ್ರದಲ್ಲಿ...

Published On :
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಬೃಹಸ್ಪತಿ ಚಿತ್ರದ ಬಳಿಕ ಚಿಲಂ ಚಿತ್ರದಲ್ಲಿ ನಟಿಸುತ್ತಿದ್ದು ಈ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕ್ವಾಟ್ಲೆ ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಕಲಾ ಅವರು ಚಿಲಂ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಈ ಚಿತ್ರದಲ್ಲಿ ಮನೋರಂಜನ್ ಗಾಂಜಾ ಸ್ಮಗ್ಲರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ರಾಘವೇಂದ್ರ ರಾಜಕುಮಾರ್ ಕೂಡ ಚಿಲಂ ತಂಡ ಸೇರಿಕೊಳ್ಳತ್ತಾರೆ ಎಂದು ಹೇಳಲಾಗುತ್ತಿದೆ.
ನಿರ್ದೇಶಕಿ ಚಂದ್ರಕಲಾ ಅವರು ಅದಾಗಲೇ ರಾಘವೇಂದ್ರ ರಾಜಕುಮಾರ್ ಅವರನ್ನು ಭೇಟಿ ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತು ವಿವರಿಸಿದ್ದಾರೆ. ಚಿತ್ರದ ಪಾತ್ರ ಕೂಡ ರಾಘಣ್ಣ ಅವರಿಗೆ ಇಷ್ಟವಾಗಿದ್ದು ಚಿತ್ರದಲ್ಲಿ ನಟಿಸಲು ಒಪ್ಪಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಒಂದು ಚಿತ್ರದಲ್ಲಿ ನಟಿಸಲು ರಾಘಣ್ಣ ಹಸಿರು ನಿಶಾನೆ ತೋರಿಸಿದರೆ ಬರೋಬ್ಬರಿ 14 ವರ್ಷಗಳ ಬಳಿಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದಂತಾಗುತ್ತದೆ. ಅಲ್ಲದೆ ಇದೇ ಮೊದಲ ಬಾರಿಗೆ ವಿಲನ್ ಅವತಾರದಲ್ಲಿ ಕಾಣಿಸಿಕೊಳ್ಳಲಿರುವುದು ವಿಶೇಷ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


