'ಚಿಲ್ಲಂ' ಚಿತ್ರದ ಮೂಲಕ ಹಿರಿಯ ನಟಿ ಸರಿತಾ ಕನ್ನಡಕ್ಕೆ ವಾಪಸ್
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ “ಬೃಹಸ್ಪತಿ” ಚಿತ್ರದ ಬಳಿಕ ಕೆ. ಚಂದ್ರಕಲಾ ನಿರ್ದೇಶನದ “ಚಿಲಂ” ಚಿತ್ರದಲ್ಲಿ ನಟಿಸುತ್ತಿದ್ದಾರೆ. ...

Published On :
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ “ಬೃಹಸ್ಪತಿ” ಚಿತ್ರದ ಬಳಿಕ ಕೆ. ಚಂದ್ರಕಲಾ ನಿರ್ದೇಶನದ “ಚಿಲಂ” ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಈ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಕ್ವಾಟ್ಲೆ ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಕಲಾ ಅವರು ಚಿಲಂ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಈ ಚಿತ್ರದಲ್ಲಿ ಮನೋರಂಜನ್ ಗಾಂಜಾ ಸ್ಮಗ್ಲರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನೂ ಈ ಚಿತ್ರದಲ್ಲಿ ಹಿರಿಯ ನಟಿ ಸರಿತಾ ಕೂಡ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನೀನಾಸಂ ಸತೀಶ್ ನಟನೆಯ ಅಯೋಗ್ಯ ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಸರಿತಾ ಚಿಲಂ ನಲ್ಲಿಯೂ ನಟಿಸಲಿದ್ದಾರೆ,
ಚಿಲಂ ಚಿತದಲ್ಲಿ ಉತ್ತಮ ಪಾತ್ರ ತರಲು ನಿರ್ದೇಶಕಿ ಚಂದ್ರಕಲಾ ತಯಾರಾಗಿದ್ದಾರೆ. ಚಿತ್ರದ ಕಥೆ ಕೇಳಿ ಸರಿತಾ ಕೂಡ ಉತ್ಸುಕರಾಗಿದ್ದಾರೆ, ಕಥೆ ಕೇಳಿಗದ ಮರುಕ್ಷಣವೇ ನಟನೆಗೆ ಒಪ್ಪಿಗೊಂಡರು ಎಂದು ಚಂದ್ರಕಲಾ ತಿಳಿಸಿದ್ದಾರೆಯ ತಮ್ಮ ಹುಟ್ಟು ಹಬ್ಬದ ನಂತರ ಜೂನ್ ತಿಂಗಳಿನಿಂದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.
1975 ರಲ್ಲಿ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ಸರಿತಾ ಸುಮಾರು 20 ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಾ. ರಾಜ್ ಕುಮಾರ್ ಜೊತೆಯಲ್ಲಿ ಹೊಸಬೆಳಕು, ಚಲಿಸುವ ಮೋಡಗಳು, ಕಾಮನ ಬಿಲ್ಲು, ಭಕ್ತ ಪ್ರಹ್ಲಾದ, ಹಾಗೂ ವಿಷ್ಣು ವರ್ಧನ್ ಜೊತೆ ಮಲಯ ಮಾರುತ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


