ಸಿನಿಮಾ ಸುದ್ದಿ

ಖ್ಯಾತ ನಿರ್ದೇಶಕ ಸಿ.ವಿ. ರಾಜೇಂದ್ರನ್ ವಿಧಿವಶ

ಖ್ಯಾತ ನಿರ್ದೇಶಕ ಸಿ.ವಿ.ರಾಜೇಂದ್ರನ್ (81) ಅವರು ಭಾನುವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ...

ಖ್ಯಾತ ನಿರ್ದೇಶಕ ಸಿ.ವಿ. ರಾಜೇಂದ್ರನ್ ವಿಧಿವಶ
ನಿರ್ದೇಶಕ ಸಿ.ವಿ.ರಾಜೇಂದ್ರನ್
Published On :
ಚೆನ್ನೈ: ಖ್ಯಾತ ನಿರ್ದೇಶಕ ಸಿವಿ ರಾಜೇಂದ್ರನ್ (81) ಅವರು ಭಾನುವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. 
ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ ಕುಮಾರ್ ಅಭಿನಯದ ತ್ರಿಮೂರ್ತಿ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದ್ದ ರಾಜೇಂದ್ರನ್ ಅವರು ದೀರ್ಘಾಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಮಿಯಾಟ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. 
ರಾಜೇಂದ್ರ ಅವರು ಪತ್ನಿ ಜಾನಕಿ ರಾಜೇಂದ್ರನ್, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪ್ರಸ್ತುತ ರಾಜೇಂದ್ರ ಅವರ ಪುತ್ರ ಅಮೆರಿಕದಲ್ಲಿದ್ದು, ಭಾರತಕ್ಕೆ ಬಂದ ಬಳಿಕ ಅಂತಿಮ ಕಾರ್ಯಗಳು ನಡೆಯಲಿವೆ ಎಂದು ವರದಿಗಳು ತಿಳಿಸಿವೆ. 
ತ್ರಿಮೂರ್ತಿ ಸಿವಿ. ರಾಜೇಂದ್ರನ್ ಅವರು ನಿರ್ದೇಶಿಸಿದ ಕನ್ನಡದ ಮೊದಲ ಸಿನಿಮಾವಾಗಿದೆ. ಇದಾದ ಬಳಿಕ ಡಾ.ವಿಷ್ಣುವರ್ಧನ್, ಗಲಾಟೆ ಸಂಸಾರ, ದ್ವಾರಕೀಶ್ ನಿರ್ಮಾಣದ ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಾಕುಳ್ಳ, ಪ್ರೀತಿ ಮಾಡು ತಮಾಷೆ ನೋಡು, ಘರ್ಜನೆ ಸೇರಿದಂತೆ ವಿವಿಧ ಚಿತ್ರಗಳನ್ನು ನಿರ್ದೇಶಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.