ಸೌಮಿತ್ರ ಚಟರ್ಜಿ, ಬುದ್ಧದೇವ್ ದಾಸ್ ಗುಪ್ತ ಗೆ ಜೀವಮಾನ ಸಾಧನೆ ಪ್ರಶಸ್ತಿ
ಅರವತ್ತರ ದಶಕದಲ್ಲಿ ಭಾರತದ ಪ್ರಮುಖ ನಾಯಕನಟರಾಗಿದ್ದ ಸೌಮಿತ್ರ ಚಟರ್ಜಿ ಹಾಗೂ ಚಲನಚಿತ್ರ ನಿರ್ಮಾಪಕ ಬುದ್ಧದೇವ್ ದಾಸ್ ಗುಪ್ತ ಅವರ ಸಿನಿಮಾ ಸಾಧನೆಯನ್ನು ಗುರುತಿಸಿ ಜೀವಮಾನದ ಸಾಧನೆ...

Published On :
ಕೋಲ್ಕತ್ತಾ: ಅರವತ್ತರ ದಶಕದಲ್ಲಿ ಭಾರತದ ಪ್ರಮುಖ ನಾಯಕನಟರಾಗಿದ್ದ ಸೌಮಿತ್ರ ಚಟರ್ಜಿ ಹಾಗೂ ಚಲನಚಿತ್ರ ನಿರ್ಮಾಪಕ ಬುದ್ಧದೇವ್ ದಾಸ್ ಗುಪ್ತ ಅವರ ಸಿನಿಮಾ ಸಾಧನೆಯನ್ನು ಗುರುತಿಸಿ ಜೀವಮಾನದ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ.
ಕೋಲ್ಕತ್ತಾದಲ್ಲಿ ಮೇ.2 ರಂದು ನಡೆದ 3ನೇ ಬಂಗಾಳ ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವದಲ್ಲಿ ಸೌಮಿತ್ರ ಚಟರ್ಜಿ, ಬುದ್ಧದೇವ್ ದಾಸ್ ಗುಪ್ತ ಅವರಿಗೆ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ನೀಡಲಾಗಿದೆ. ಚಟರ್ಜಿ ಅವರಿಗೆ ಹರಿಲಾಲ್ ಸೇನಾ ಪ್ರಶಸ್ತಿಯನ್ನು ಬಂಗಾಳದ ಖ್ಯಾತ ನಟ ಪ್ರಸೇನ್ಜಿತ್ ಚಟರ್ಜಿ ಹಾಗೂ ಪಶ್ಚಿಮ ಬಂಗಾಳದ ಮಾಹಿತಿ ತಂತ್ರಜ್ಞಾನ ಸಚಿವ ಬ್ರಾಟಿಯಾ ಬಸು ಪ್ರದಾನ ಮಾಡಿದ್ದು, ದಾಸ್ ಗುಪ್ತ ಅವರಿಗೆ ಅನಾರೋಗ್ಯ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದೇವಕಿ ಕುಮಾರ್ ಬೋಸ್ ಪ್ರಶಸ್ತಿಯನ್ನು ದಾಸ್ ಗುಪ್ತಾ ಅವರ ಸಹಾಯಕರ
ಮೂಲಕ ತಲುಪಿಸಲಾಗಿದೆ.
65 ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗೆ ಭಾಜನರಾಗಿದ್ದ ಯುವ ನಟ ರಿದ್ಧಿ ಸೇನ್ ಗೆ ಈ ವರ್ಷ ಕಾರ್ಯಕ್ರಮದಲ್ಲಿ ವಿಶೇಷ ಸನ್ಮಾನ ಮಾಡಲಾಯಿತು. ಬಂಗಾಳದ ಸಿನಿಮಾಗಳನ್ನು ದೇಶಾದ್ಯಂತ ವಿತರಿಸಲು ಶ್ರಮಿಸುತ್ತಿರುವ ಭಾರತದ ಮುಂಚೂಣಿಯಲ್ಲಿರುವ ಸಿನಿಮಾ ನಿರ್ಮಾಣ ಸಂಸ್ಥೆಗಳ ಪೈಕಿ ಒಂದಾದ ಶ್ರೀ ವೆಂಕಟೇಶ್ ಸಿನಿಮಾ ಸಂಸ್ಥೆಗೂ ಪ್ರಶಸ್ತಿ ನೀಡಲಾಗಿದೆ.
44 ಭಾರತೀಯ, 10 ವಿದೇಶಿ ಸೇರಿದಂತೆ ಒಟ್ಟಾರೆ 54 ಸಿನಿಮಾಗಳು ಕಿರು ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜೀವಮಾನ ಸಾಧನೆ ಪ್ರಶಸ್ತಿSoumitra ChatterjeeBuddhadeb Dasguptalifetime achievement awardsಸೌಮಿತ್ರ ಚಟರ್ಜಿಬುದ್ಧದೇವ್ ದಾಸ್ ಗುಪ್ತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


