ಚಾಮುಂಡೇಶ್ವರಿಯಲ್ಲಿ ಸಿಎಂ ಪರ ದರ್ಶನ್ ಪ್ರಚಾರ: ನಟನ ವಿರುದ್ಧ ಪ್ರತಿಭಟನೆ
ಚಾಮುಂಡೇಶ್ವರಿ ಕ್ಷೇತ್ರ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು ತಾರಾ ಪ್ರಚಾರಕರು ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಪ್ರಚಾರ ನ...

Published On :
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು ತಾರಾ ಪ್ರಚಾರಕರು ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಪ್ರಚಾರ ನಡೆಸುತ್ತಿದ್ದಾರೆ.
ಶನಿವಾರ ನಟ ದರ್ಶನ್ ಅವರು ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದು, ನಾಗನಹಳ್ಳಿಯಲ್ಲಿ ಜೆಡಿಎಸ್ ಕಾಯಕರ್ತರು ಪ್ರತಿಭಟನೆ ನಡೆಸಿ ವಿರೋಧ ತೋರಿದ್ದಾರೆ. ಅಂಬರೀಷ್ ಅವರ ಸಚಿವ ಸ್ಥಾನ ಕಿತ್ತುಕೊಂಡಾಗ ಯಾಕೆ ಮಾತನಾಡಲಿಲ್ಲ, ಕಾವೇರಿ ಪರ ಹೋರಾಟ ಯಾಕೆ ಮಾಡಲಿಲ್ಲ ಎಂದು ಪ್ರತಿಭಟನಾ ನಿರತರು ದರ್ಶನ್ ಅವರನ್ನು ಪ್ರಶ್ನಿಸಿದ್ದಾರೆ.
ನಾಗನಹಳ್ಳಿಯಲ್ಲಿ ಸಿಎಂ ಪರ ನಟ ದರ್ಶನ್ ಮತಯಾಚಿಸುತ್ತಿದ್ದು, ಜೆಡಿಎಸ್ ಕಾರ್ಯಕರ್ತರು ಧರಣಿ ಕುಳಿತು ದರ್ಶನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಿದ್ದರಾಮಯ್ಯDarshancampaignದರ್ಶನ್Chamundeshwariಪ್ರಚಾರKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


