ನಟಸಾರ್ವಭೌಮ ಚಿತ್ರದ ಶೂಟಿಂಗ್ ಮತ್ತೆ ಆರಂಭ
ವಿಧಾನಸಭೆ ಚುನಾವಣೆ ಕಾವು ಮುಗಿಯುತ್ತಿದ್ದಂತೆ ಸ್ಯಾಂಡಲ್ ವುಡ್ ಮಂದಿ ಮತ್ತೆ ಚಟುವಟಿಕೆಗಳಲ್ಲಿ...

ವಿಧಾನಸಭೆ ಚುನಾವಣೆ ಕಾವು ಮುಗಿಯುತ್ತಿದ್ದಂತೆ ಸ್ಯಾಂಡಲ್ ವುಡ್ ಮಂದಿ ಮತ್ತೆ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಪುನೀತ್ ರಾಜ್ ಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಎರಡನೇ ಶೆಡ್ಯೂಲ್ ಶೂಟಿಂಗ್ ಇಂದು ಪ್ರಾರಂಭವಾಗಿದೆ.
ರಾಕ್ ಲೈನ್ ಪ್ರೊಡಕ್ಷನ್ ನಡಿಯಲ್ಲಿ ನಟಸಾರ್ವಭೌಮ ಶೂಟಿಂಗ್ ಮಾರ್ಚ್ ವೇಳೆಗೆ ಆರಂಭವಾಗಿತ್ತು. ಇದೀಗ ನೆಲಮಂಗಲ ಹತ್ತಿರ ಚಿತ್ರದ ಫೈಟಿಂಗ್ ದೃಶ್ಯ ಮತ್ತು ಕೆಲವು ಸನ್ನಿವೇಶಗಳು ಚಿತ್ರೀಕರಣಗೊಳ್ಳುತ್ತಿವೆ.
ಪುನೀತ್ ಅವರ ಜೊತೆ ಹಿರಿಯ ನಟಿ ಸರೋಜಾ ದೇವಿ ಕೂಡ ಇಂದು ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.
ಬಾಹುಬಲಿ ಚಿತ್ರದ ಖ್ಯಾತಿಯ ಪ್ರಭಾಕರನ್ ಅವರು ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರದ ನಾಯಕಿ ರಚಿತಾ ರಾಮ್. ಡಿ.ಇಮ್ಮಮ್ ಅವರ ಸಂಗೀತ ಮತ್ತು ವೈದಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


