ಚಿಲ್ಲಂ ಹಿರೋಹಿನ್ ಪ್ರಿಯಾಂಕ ತಿಮ್ಮೇಶ್, ಅರ್ಜನ್ ಗೌಡ ಚಿತ್ರದಲ್ಲಿಯೂ ನಾಯಕಿ
ಜೆ. ಚಂದ್ರಕಲಾ ನಿರ್ದೇಶನದ ಚಿಲ್ಲಂ ಚಿತ್ರದ ನಟಿ ಪ್ರಿಯಾಂಕ ತಿಮ್ಮೇಶ್ , ಮತ್ತೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಪ್ರಿಯಾಂಕ್ ತಿಮ್ಮೇಶ್ ಅವರಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೆಚ್ಚೆಚ್ಚು ಸಿನಿಮಾಗಳ ಆಫರ್ ಬರುತ್ತಿದೆ.

ಜೆ. ಚಂದ್ರಕಲಾ ನಿರ್ದೇಶನದ ಚಿಲ್ಲಂ ಚಿತ್ರದ ನಟಿ ಪ್ರಿಯಾಂಕ ತಿಮ್ಮೇಶ್ , ಮತ್ತೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಪ್ರಿಯಾಂಕ್ ತಿಮ್ಮೇಶ್ ಅವರಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೆಚ್ಚೆಚ್ಚು ಸಿನಿಮಾಗಳ ಆಫರ್ ಬರುತ್ತಿದೆ.
ಲಕ್ಕಿ ಶಂಕರ್ ನಿರ್ದೇಶನದ ಅರ್ಜನ್ ಗೌಡ ಸಿನಿಮಾದಲ್ಲಿ ಪ್ರಿಯಾಂಕ್ ತಿಮ್ಮೇಶ್ ನಟಿಸುತ್ತದ್ದಾರೆ. ರಾಮು ಎಂಟರ್ ಪ್ರೈಸಸ್ ಈ ಚಿತ್ರ ನಿರ್ಮಿಸಿದ್ದು, ಪ್ರಜ್ವಲ್ ದೇವರಾಜ್ ನಾಯಕ ನಟರಾಗಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಮತ್ತೊಂದು ಜೋಡಿ ಎಂಟ್ರಿಯಾಗಿದೆ.
ಪ್ರಿಯಾಂಕ ತಿಮ್ಮೇಶ್ ಈ ಚಿತ್ರದಲ್ಲಿ ಮುಗ್ದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಮು ಎಂಟರ್ ಪ್ರೈಸಸ್ ಬ್ಯಾನರ್ ಅಂತಹ ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮೇ 18 ರಂದು ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮೇ 24 ರಂದು ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದ್ದು, ಪ್ರಿಯಾಂಕ ತಿಮ್ಮೇಶ್ ಅಲ್ಲಿ ಚಿತ್ರತಂಡ ಸೇರಲಿದ್ದಾರೆ. ಅರ್ಜುನ್ ಗೌಡ ಚಿತ್ರದಲ್ಲಿ ಸ್ಪರ್ಶ ಖ್ಯಾತಿಯ ರೇಖಾ ಕೂಡಾ ನಟಿಸುತ್ತಿದ್ದಾರೆ.ಧರ್ಮ ಮಿಲ್ಲಿಂದ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಜಯ್ ಆನಂದ್ ಅವರ ಛಾಯಾಗ್ರಹಣವಿರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


