ಸಿಎಂ ಕುಮಾರಸ್ವಾಮಿಯನ್ನು ಭೇಟಿಯಾದ ಶಿವರಾಜ್‍ಕುಮಾರ್ ದಂಪತಿ
ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೊ ಶಿವರಾಜ್‍ಕುಮಾರ್ ದಂಪತಿ ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು.

Published On :
ಬೆಂಗಳೂರು: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೊ ಶಿವರಾಜ್‍ಕುಮಾರ್ ದಂಪತಿ ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು.
ಕುಮಾರಸ್ವಾಮಿ ಅವರಿಗೆ ಶುಭ ಹಾರೈಸಲು ಬಂದಿದ್ದ ಶಿವರಾಜ್‍ಕುಮಾರ್ ಸುದ್ದಿಗಾರರೊಡನೆ ಮಾತನಾಡಿ "ಮುಖ್ಯಮಂತ್ರಿಗಳಿಗೆ ಶುಭ ಹಾರೈಸಲು ಬಂದಿದ್ದೆ, ಇದರಲ್ಲಿ ಯಾವ ರಾಜಕೀಯ ಇಲ್ಲ. ಚಲನಚಿತ್ರ ನಿರ್ಮಾಣ, ಹಿನ್ನೆಲೆಯಿಂದ ಬಂದ ಇವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮ್ಮಂತ್ರಿಗಳಾಗಿದ್ದಾರೆ. ನಮ್ಮ ಹಾಗೂ ದೇವೇಗೌಡರ ಕುಟುಂಬದ ನಂಟು ಬಹಳ ಹಳೆಯದು" ಎಂದರು.
"ಚಿತ್ರೀಕರಣ ದಲ್ಲಿದ್ದ ಕಾರಣ ಅವರ ಭೇಟಿ ಮಾಡಲಾಗಲಿಲ್ಲ. ಹೀಗಾಗಿ ಇಂದು ಆಗಮಿಸಿದ್ದೆವು.ರಾಜ್ಯದ ಜನತೆ ಪರ ಕಾಳಜಿ ಇರುವ ವ್ಯಕ್ತಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಆ ನಿಟ್ಟಿನಲ್ಲಿ ಕೆಲಸ ಮಾಡಲಿ" ಶಿವರಾಜ್‍ಕುಮಾರ್ ಹೇಳಿದರು.
ಲೋಕಸಭಾ ಚುನಾವಣೆಗೆ ಶಿವರಾಜ್‍ಕುಮಾರ್ ಪತ್ನಿ ಗೀತಾ ಸ್ಪರ್ಧೆ ಸಂಬಂಧ ಮಾತನಾಡಿದ ನಟ "ಅದು ಇನ್ನೂ ಬಹಳ ದೂರವಿದೆ, ನಾನು ಈ ಕುರಿತು ಈಗೇನೂ ಹೇಳಲಾಗುವುದಿಲ್ಲ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


